Wednesday, 14th May 2025

ನ.14ರಂದು ಖರ್ಗೆ ನೇತೃತ್ವದಲ್ಲಿ ಮೊದಲ ಕಾರ್ಯಪಡೆ ಸಭೆ

ವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ  ಕಾಂಗ್ರೆಸ್ ಕಾರ್ಯಪಡೆ ಸಭೆ ನಡೆಸಲಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆ ಸದಸ್ಯರೊಂದಿಗೆ ಸೋಮವಾರ ಖರ್ಗೆ ಅವರು ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕಾರ್ಯಪಡೆಯ ಮೊದಲ ಸಭೆ ಇದಾಗಿದೆ. ಕಾರ್ಯ ಪಡೆಯ ಸದಸ್ಯರು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ರೂಪಿಸಲಾಗಿರುವ ಕಾರ್ಯತಂತ್ರಗಳ ಬಗ್ಗೆ ಖರ್ಗೆ ಅವರಿಗೆ ವಿವರಿಸಲಿದ್ದಾರೆ.

ಕಾರ್ಯಪಡೆಯ ಸದಸ್ಯರಲ್ಲಿ ಪಿ ಚಿದಂಬರಂ, ಮುಕುಲ್ ವಾಸ್ನಿಕ್, ಜೈರಾಮ್ ರಮೇಶ್, ಕೆಸಿ ವೇಣುಗೋಪಾಲ, ಅಜಯ್ ಮಾಕನ್, ರಣದೀಪ್ ಸುರ್ಜೆವಾಲಾ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತಿತರ ಹಿರಿಯ ಕಾಂಗ್ರೆಸ್ ಮುಖಂಡರಿದ್ದಾರೆ.