Wednesday, 14th May 2025

ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್.ಮುರಳಿ ಕೃಷ್ಣ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಮಂಗಳವಾರ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗು ತ್ತಿತ್ತು. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ನಿವಾಸ ದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಗರ ಸಿನಿಮಾದ ಮೂಲಕ ಬಾಲಿವುಡ್ ನ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ್ದರು. ಈ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ.

ವೃತ್ತಿಯಲ್ಲಿ ವಕೀಲರಾಗಿದ್ದರೂ, ಪ್ರವೃತ್ತಿಯಲ್ಲಿ ಸಿನಿಮಾ ನಿರ್ದೇಶಕರಾಗಿ, ನಿರ್ಮಾಪಕ ರಾಗಿ ಸಿನಿಮಾ ರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು.