Tuesday, 13th May 2025

ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದಾದಾಪೀರ ಶೇಖ ನೇಮಕ

ಬಸವನಬಾಗೇವಾಡಿ: ಪಟ್ಟಣದ ದಾದಾಪೀರ ಶೇಖ ಅವರನ್ನು ಕರ್ನಾಟಕ ಪ್ರದೇಶ ಜನತಾದಳದ(ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.

ಪಕ್ಷದ ಜವಾಬ್ದಾರಿ ವಹಿಸಿಕೊಂಡು ಪಕ್ಷದ ತತ್ವಸಿದ್ದಾಂತಗಳಿಗೆ ಬದ್ದವಾಗಿ ಪಕ್ಷದ ಎಲ್ಲ ಕಾರ್ಯಕರ್ತರನ್ನ ವಿಶ್ವಾಸಕ್ಕೆ ತೆಗೆದು ಕೊಂಡು ರಾಜ್ಯದಲ್ಲಿ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿರಿ ಎಂದು ಅವರು ಆದೇಶ ಪತ್ರದ ಮೂಲಕ ತಿಳಿಸಿದ್ದಾರೆ.