
ಅಲ್ಲದೇ, ಕೋವಿಡ್ ನಿಂದ ಮೃತಪಡುವವರ ಒಟ್ಟು ಸಂಖ್ಯೆ 5,30,608ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,395ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 506 ಮಂದಿ ಗುಣ ಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,35,216ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 2,67,170 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,50,18,779 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,199,028,193 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.