Thursday, 15th May 2025

ಅನಿಲ್ ದೇಶ್ಮುಖ್ ಅವರಿಗೆ ಜಾಮೀನು ಮಂಜೂರು

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ ಅವರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ಸಿಬಿಐ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇತ್ತೀಚೆಗೆ, ನ್ಯಾಯಮೂರ್ತಿ ಎಂ.ಎಸ್.ಕಾರ್ಣಿಕ್ ಅವರ ಏಕಸದಸ್ಯ ಪೀಠವು ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.