ಬೆಂಗಳೂರು: ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಕಿತ್ತಾಟ ಕೇಸ್ ಮರುಜೀವ ಪಡೆದುಕೊಂಡಿದೆ.

ಸೆಪ್ಟೆಂಬರ್ 23, 2018 ರಂದು ವಿಜಯ್ ಮತ್ತು ಅವರ ಮಗ ಸಾಮ್ರಾಟ್ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಹೋಗಿದ್ದರು. ಅಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತ್ತಿತ್ತು. ಕಾರ್ಯಕ್ರಮಕ್ಕೆ ದುನಿಯಾ ವಿಜಯ್ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಸ್ಥಳದಲ್ಲಿದ್ದ ಮಾರುತಿ ಗೌಡ ಎಂಬಾತ ಕೆಲ ನಿಂದನಾತ್ಮಕ ಮಾತುಗಳನ್ನಾಡಿದ್ದಾನೆ.
ಆಕ್ರೋಶಗೊಂಡ ನಟನ ಅಭಿಮಾನಿಗಳು ಮಾರುತಿ ಗೌಡರನ್ನು ಸುತ್ತುವರೆದಿದ್ದು, ನಂತರ ವಿಜಯ್ ಅವರನ್ನು ಅವರ ಕಾರಿನಲ್ಲಿ ಕೂರಿಸಿದ್ದಾರೆ. ಆದರೆ, ಮಾರುತಿ ಗೌಡರ ಸಂಬಂಧಿ ಪಾನಿಪುರಿ ಕಿಟ್ಟಿ ತಕ್ಷಣವೇ ಹೈಗ್ರೌಂಡ್ಸ್ ಪೊಲೀಸರನ್ನು ಸಂಪರ್ಕಿಸಿ, ವಿಜಯ್ ಗೌಡನನ್ನು ಅಪಹರಿಸಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು.
ವಿಜಯ್ ಅವರು ಠಾಣೆಗೆ ಪ್ರವೇಶಿಸುತ್ತಿದ್ದಂತೆಯೇ, ಕಿಟ್ಟಿ ಮತ್ತು ಅವರ ಸಹಾಯಕರು ವಿಜಯ್ಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಅವರ ಕಾರಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಪಹರಣದ ಆರೋಪದ ಮೇಲೆ ವಿಜಯ್ ಮತ್ತು ಇತರ ಮೂವರನ್ನು ಪೊಲೀಸರು ಬಂಧಿಸಿದ್ದರು. ನಂತರ ನಟ ಕಿಟ್ಟಿ, ಮಾರುತಿ ಗೌಡ ಮತ್ತು ಇತರರ ವಿರುದ್ಧ ಪ್ರತಿದೂರು ದಾಖಲಾ ಗಿತ್ತು.