Thursday, 15th May 2025

ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾ

ವದೆಹಲಿ : ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊ ಳಿಸಿದೆ.

2008 ರಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬ ಸದಸ್ಯರನ್ನು ಹತ್ಯೆಗೈದ ಆರೋಪದ ಮೇಲೆ ಶಿಕ್ಷೆಗೊಳಗಾದ ಆರೋಪಿಗಳ ಬಿಡುಗಡೆ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

2008 ರಲ್ಲಿ ಶಿಕ್ಷೆಗೊಳಗಾದ 11 ಆರೋಪಿಗಳನ್ನು ಆಗಸ್ಟ್ 15 ರಂದು ಗೋಧ್ರಾ ಉಪ-ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರವು ತನ್ನ ಉಪಶಮನ ನೀತಿಯ ಅಡಿಯಲ್ಲಿ ಆರೋಪಿಗಳ ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗಲಭೆಯಿಂದ ತಪ್ಪಿಸಿಕೊಳ್ಳುವಾಗ ಬಿಲ್ಕಿಸ್ ಬಾನೋ ಐದು ತಿಂಗಳ ಗರ್ಭಿಣಿಯಾಗಿದ್ದಳು.

ಕೊಲೆಯಾದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಾಳೆ.