Wednesday, 14th May 2025

ಭೀಕರ ಅಪಘಾತ: ಬೈಕ್‌, ಬಸ್‌ ಸಂಪೂರ್ಣ ಸುಟ್ಟು ಕರಕಲು

ಕೃಷ್ಣಗಿರಿ (ತಮಿಳುನಾಡು): ತಮಿಳುನಾಡಿನ ಕೃಷ್ಣಗಿರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅವಘಡದಲ್ಲಿ ಬೈಕ್‌ ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ. ಬಸ್‌ ಕೂಡಾ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕರಕಲಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಬಳಿಯ ಮೆಡಿಕಲ್ ಕಾಲೇಜು ಸಮೀಪ ಭಾನುವಾರ ಈ ಭೀಕರ ಅಪಘಾತ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಈ ಬಸ್‌ ಎದುರಿನಿಂದ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಮರು ಕ್ಷಣವೇ ಬೈಕ್‌ಗೆ ಬೆಂಕಿ ಹತ್ತಿಕೊಂಡಿದೆ. ಸವಾರರಿಬ್ಬರೂ ಬೈಕ್‌ ಜತೆಗೆ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಬೆಂಕಿಯ ಕಿಡಿ ಹೊತ್ತಿಕೊಂಡು ಬಸ್‌ಗೆ ಬೆಂಕಿ ಹಿಡಿ ಯಿತು. ಕೂಡಲೇ ಬಸ್‌ನಲ್ಲಿದ್ದ ಎಲ್ಲ ೩೦ ಮಂದಿ ಹೊರಗೋಡಿ ಬಂದಿದ್ದರಿಂದ ಬಸ್‌ ನಲ್ಲಿದ್ದ ಪ್ರಯಾಣಿಕರಿಗೆ ತೊಂದರೆ ಆಗಿಲ್ಲ.

ಆದರೆ, ಬಸ್‌ ಮಾತ್ರ ಆರಂಭದಿಂದ ಕೊನೆ ಯವರೆಗೂ ಸುಟ್ಟು ಭಸ್ಮವಾಗಿದೆ. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Read E-Paper click here