Wednesday, 14th May 2025

ರಾಜ್ಯಪಾಲರ ಭಾಷಣಕ್ಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತೀವ್ರ ಆಕ್ಷೇಪ

ಚೆನ್ನೈ: ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನ ಸೋಮವಾರ ರಾಜ್ಯಪಾಲ ಆರ್ ಎನ್ ರವಿ ಭಾಷಣದ ನಂತರ ಗದ್ದಲ, ಕೋಲಾಹಲ ಉಂಟಾಯಿತು.
ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ಕಡತಕ್ಕೆ ತೆಗೆದುಕೊಳ್ಳಬೇಕು, ರಾಜ್ಯ ಪಾಲರು ಸೇರಿಸಿರುವ ಉಳಿದ ಭಾಷಣ ವನ್ನು ತೆಗೆದುಹಾಕಬೇಕೆಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸ್ಪೀಕರ್ ಗೆ ಹೇಳಿದ ನಂತರ ಗವರ್ನರ್ ಆರ್ ಎನ್ ರವಿ ಸದನ ದಿಂದ ಹೊರ ನಡೆದರು.
ರಾಜ್ಯ ಸರ್ಕಾರ ಸಿದ್ದಪಡಿಸಿದ ರಾಜ್ಯಪಾಲರ ಮೂಲ ಭಾಷಣವನ್ನು ಮಾತ್ರ ಕಡತಕ್ಕೆ ಸೇರಿಸುವಂತೆ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ರಾಜ್ಯಪಾಲರ ಭಾಷಣಕ್ಕೆ ಎಂಕೆ ಸ್ಟಾಲಿನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಗವರ್ನರ್ ಸದನದಿಂದ ನಿರ್ಗಮಿಸಿದರು.
Read E-Paper click here