Tuesday, 13th May 2025

171 ಹೊಸ ಕರೋನಾ ಸೋಂಕು ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 171 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆ ಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,342ಕ್ಕೆ ಏರಿಕೆಯಾಗಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,80,386ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾ ದವರ ಸಂಖ್ಯೆ 5,30,722ಕ್ಕೆ ಏರಿಕೆ ಯಾಗಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.15 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸ ಲಾಗಿದೆ ಎಂದು ಸಚಿವಾಲಯದ ಅಂಕಿಅಂಶ ಗಳು ತಿಳಿಸಿವೆ.

Read E-Paper click here