Sunday, 11th May 2025

ಮಹಾರಾಷ್ಟ್ರ ಸಂಸದರಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ

ಬೆಳಗಾವಿ: ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಕರ್ನಾಟಕ ಪ್ರವೇಶಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ.

ಬೆಳಗಾವಿಯಲ್ಲಿ ಎಂಇಎಸ್ ಹುತಾತ್ಮ ದಿನ ಆಯೋಜನೆ ಮಾಡಿದ್ದು, ಮಹಾ ಸಂಸದ ಧೈರ್ಯಶೀಲ ಮಾನೆ ಈ ಕಾರ್ಯ ಕ್ರಮಕ್ಕೆ ಆಗಮಿಸಲಿದ್ದರು. ಆದರೆ ಬೆಳಗಾವಿ ಡಿಸಿ ನಿತೇಶ್ ಪಾಟೀಲ್, ಸಂಸದರಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿ ದ್ದಾರೆ.

ಎಂಇಎಸ್ ಬೆಳಗಾವಿಯಲ್ಲಿ ಆಯೋಜಿಸಿದ್ದ ಹುತಾತ್ಮ ದಿನ ಕಾರ್ಯಕ್ರಮಕ್ಕೆ ಬರುವಂತೆ ಮಹಾರಷ್ಟ್ರ ಸಂಸದ ಧೈರ್ಯಶೀಲ ಮಾನೆಗೆ ಆಹ್ವಾನ ನೀಡಿತ್ತು.

ಬೆಳಗಾವಿ ಪ್ರವಾಸದ ಪಟ್ಟಿಯನ್ನು ಸಂಸದರು ಬಿಡುಗಡೆ ಮಾಡಿದ್ದರು. ಸಂಸದರ ಭೇಟಿಯಿಂದ ಬೆಳಗಾವಿಯಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಸದ ಧೈರ್ಯಶೀಲ ಅವರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸಂಸದರ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ.