Thursday, 15th May 2025

ನ್ಯೂಜಿಲೆಂಡ್ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್

ವದೆಹಲಿ: ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಮೂರು ಏಕದಿನ ಸರಣಿ ಯಿಂದ ಹೊರಗುಳಿದಿದ್ದಾರೆ.

ಜನವರಿ 18 ರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಏಕದಿನ ಸರಣಿ ನಡೆಯಲಿದೆ. ಇದಕ್ಕೂ ಮುನ್ನವೇ ಭಾರತೀಯ ಪಾಳಯ ಭಾರೀ ಹಿನ್ನಡೆ ಅನುಭವಿಸಿದೆ.

ಜನವರಿ 18 ರಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸರಣಿಯ ಮೊದಲ ಪಂದ್ಯ ಹೈದರಾಬಾದ್’ನಲ್ಲಿ. ಇದಾದ ಬಳಿಕ ಎರಡನೇ ಪಂದ್ಯ ಜನವರಿ 21ರಂದು ರಾಯ್ಪುರದಲ್ಲಿ ನಡೆಯಲಿದೆ. ಸರಣಿಯ ಕೊನೆಯ ಪಂದ್ಯ ಜನವರಿ 24 ರಂದು ಇಂದೋರ್ನಲ್ಲಿ ನಡೆಯಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ನಡೆಯಲಿದೆ.

ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (c), ಶುಭಮನ್ ಗಿಲ್, ಇಶಾನ್ ಕಿಶನ್ (wk), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, KS ಭರತ್ (wk), ಹಾರ್ದಿಕ್ ಪಾಂಡ್ಯ (vc), ರಜತ್ ಪಾಟಿದಾರ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.