
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಐದನೇ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ . ಕಳೆದ ವರ್ಷ ಕೇಂದ್ರ ಸರ್ಕಾರವು 2023 ರ ಡಿಸೆಂಬರ್ವರೆಗೂ ಉಚಿತ ಆಹಾರಧಾನ್ಯಗಳನ್ನು ವಿತರಿಸಲು ನಿರ್ಧರಿಸಲಾಗಿತ್ತು. ಇದೀಗ 2024 ರವರೆಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ.
ಈ ಯೋಜನೆಯಡಿ 81 ಕೋಟಿಗೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ತೀರಾ ಅಗ್ಗದ ಬೆಲೆಯಲ್ಲಿ ಅಕ್ಕಿ , ಗೋಧಿ , ಸಕ್ಕರೆ ಇತ್ಯಾದಿ ಅಗತ್ಯ ಆಹಾರವಸ್ತುಗಳನ್ನು ನೀಡುತ್ತದೆ . ಕೋವಿಡ್ ವೇಳೆ ಈ ಉಚಿತ ಆಹಾರಧಾನ್ಯ ವಿತರಣೆ ಕೋಟ್ಯಂತರ ಜನರಿಗೆ ಅನುಕೂಲವಾಗಿತ್ತು.
ಇದೇ ವೇಳೆ, ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟಪ್ಗಳಿಗೆ ಉತ್ತೇಜನ ಕೊಡಲು ಸರ್ಕಾರ ಅಗ್ರಿಕಲ್ಚರ್ ಆಕ್ಸಲರೇಟರ್ ಫಂಡ್ ಅನ್ನು ಸ್ಥಾಪಿ ಸಿದೆ.
Read E-Paper click here