Saturday, 10th May 2025

ಫೆ.24,25ರಂದು ಜಿ20 ರಾಷ್ಟ್ರ ವಿತ್ತ ಸಚಿವರ ಸಭೆ

Nirmala Sitharaman

ವದೆಹಲಿ: ಜಿ20 ರಾಷ್ಟ್ರಗಳ ವಿತ್ತ ಸಚಿವರು ಹಾಗೂ ಕೇಂದ್ರ ಬ್ಯಾಂಕ್‌ಗಳ ಗವರ್ನರ್‌ಗಳ ಸಭೆ ಫೆ.24 ಮತ್ತು 25ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಜಗತ್ತಿನ ಅರ್ಥ ವ್ಯವಸ್ಥೆ, ಅಂತಾರಾಷ್ಟ್ರೀಯ ತೆರಿಗೆ ಪದ್ಧತಿ, ವಿತ್ತೀಯ ಒಳಗೊಳ್ಳುವಿಕೆಗೆ ಸಂಬಂಧಿಸಿದಂತೆ ಡಿಜಿಟಲ್‌ ವ್ಯವಸ್ಥೆಗಳ ಬಳಕೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಜಿ20 ರಾಷ್ಟ್ರಗಳ ವಿತ್ತ ಸಚಿವರ ಮೊದಲ ಸಭೆಯೂ ಇದಾಗಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಜಂಟಿಯಾಗಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಫೆ.22ರಂದು ಹಣಕಾಸು ಮತ್ತು ಕೇಂದ್ರೀಯ ಬ್ಯಾಂಕ್‌ಗಳ ಗವರ್ನರ್‌ಗಳ ಉಪ ಮುಖ್ಯಸ್ಥರ ಸಭೆಯೂ ನಡೆಯ ಲಿದೆ. ಅದನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಉದ್ಘಾಟಿಸಲಿದ್ದಾರೆ.