Thursday, 15th May 2025

ಪ್ರವಾಸೋದ್ಯಮ ಇಲಾಖೆ ಹಿರಿಯ ಅಧಿಕಾರಿ ಆತ್ಮಹತ್ಯೆ

ಮುಂಬೈ: ಕೆಲಸದ ಒತ್ತಡದಿಂದಾಗಿ ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ ಪ್ರದೇಶದ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿ ಮಂಗಳವಾರ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ವಿಮಲೇಶ್ ಕುಮಾರ್ ಬನಾರಸಿದಾಸ್, ತಾವು ವಾಸವಿದ್ದ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದು ಸಾವಿಗೀಡಾಗಿದ್ದಾರೆ. ತಿಲಕನಗರದ ಪೂರ್ವ ಉಪನಗರದಲ್ಲಿರುವ ತಾರಾ ಗಗನ್ ಹೌಸಿಂಗ್ ಸೊಸೈಟಿ ಆವರಣದಲ್ಲಿ ವಾಸ ವಿದ್ದರು.

ತಮ್ಮ ಪತಿ ಉತ್ತರ ಪ್ರದೇಶ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಮುಂಬೈನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸದ ಒತ್ತಡ ಮತ್ತು ಕಚೇರಿ ಮನೆಯಿಂದ ದೂರವಿದ್ದ ಕಾರಣ ಎರಡು ತಿಂಗಳ ಹಿಂದೆ ಉಪ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.