Thursday, 15th May 2025

ಎಸ್‍ಯುವಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ವದೆಹಲಿ: ಕಾರು ಮತ್ತು ರಸ್ತೆ ಬದಿಯ ಬಂಡಿಗಳಿಗೆ ವೇಗವಾಗಿ ಬಂದ ಎಸ್‍ಯುವಿ ಡಿಕ್ಕಿ ಹೊಡೆದ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನೈರುತ್ಯ ದಿಲ್ಲಿಯ ವಸಂತ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.

ವಸಂತ್ ವಿಹಾರ್ ಪ್ರದೇಶದಲ್ಲಿ ವೇಗವಾಗಿ ಬಂದ ಎಸ್‍ಯುವಿ ಎರಡು ಕಾರುಗಳು ಮತ್ತು ಮೂರು ಬಂಡಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಮಕ್ಕಳು ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಏಮ್ಸï ಟ್ರಾಮಾ ಸೆಂಟರ್‍ಗೆ ಕರೆದೊಯ್ಯಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಮನೋಜ್ ಸಿ ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಮುನ್ನ ಮತ್ತು ಸಮೀರ್ ಎಂದು ಗುರುತಿಸಲಾಗಿದೆ.