Tuesday, 13th May 2025

ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿಯಾಗಿ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್‌ಟೇಬಲ್ ಎಚ್.ಎಂ ಲೋಕೇಶ್, ಇದೀಗ ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ.

ಪೊಲೀಸ್ ಆಯುಕ್ತರಾದ ಪ್ರವೀಣ್ ಸೂದ್, ಮೇಘರಿಕ್, ಸುನೀಲ್ ಕುಮಾರ್, ಭಾಸ್ಕರ್ ರಾವ್, ಕಮಲ್ ಪಂತ್ ಮತ್ತು ಪ್ರತಾಪ್ ರೆಡ್ಡಿ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪೊಲೀಸ್ ಸೋಷಿಯಲ್ ಮೀಡಿಯಾ ಖಾತೆಗೆ ಹೊಸ ಛಾಪು ಮೂಡಿಸಿದ್ದರು. ಲೋಕೇಶ್ ಅವರು ಕರೊನಾ ಸಮಯದಲ್ಲಿ ನಾಗರಿಕರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಜನರ ಸಂದೇಹಗಳಿಗೆ ಉತ್ತರಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದರು.
ಅವರು ಸಂವಹನ, ಇಂಗ್ಲೀಷ್ ಹಾಗೂ ಕಂಪ್ಯೂಟರ್ ಕೌಶಲ್ಯ ಹೊಂದಿದ್ದರು. ಈ ಪ್ರತಿಭೆಯೇ ಅವರಿಗೆ ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿ ಆಯ್ಕೆ ಆಗುವುದಕ್ಕೆ ಸಹಯವಾಗಿದೆ.