Wednesday, 14th May 2025

ನಟ ಮಮ್ಮುಟ್ಟಿ ತಾಯಿ ಫಾತಿಮಾ ಇಸ್ಮಾಯಿಲ್ ನಿಧನ

ಕೊಚ್ಚಿ (ಕೇರಳ): ಸೂಪರ್‌ ಸ್ಟಾರ್ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಬೆಳಿಗ್ಗೆ ಮೃತಪಟ್ಟಿದ್ದಾರೆ.

ತಾಯಿ ನಿಧನ ಹಿನ್ನೆಲೆ ಮಮ್ಮುಟ್ಟಿ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಅವರು ವಯೋಸಹಜ ಕಾಯಿಲೆ ಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ನಿಧನರಾದರು. ಮಮ್ಮುಟ್ಟಿ ಸೇರಿದಂತೆ ಕುಟುಂಬಸ್ಥ ರನ್ನು ಅಗಲಿದ್ದಾರೆ. ಕೊಚ್ಚಿಯ ಚೆಂಬು ಮುಸ್ಲಿಂ ಜಮಾತ್ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

ಕಳೆದ ಕೆಲ ವರ್ಷಗಳಿಂದ ಫಾತಿಮಾ ಇಸ್ಮಾಯಿಲ್ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಯಲ್ಲಿದ್ದ ಸಂದರ್ಭವೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಮಮ್ಮುಟ್ಟಿ ಅವರ ತಾಯಿ ನಿಧನದಿಂದ ಕುಟುಂಬ, ಮಲಯಾಳಂ ಚಿತ್ರರಂಗ ಸೇರಿದಂತೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಮಮ್ಮುಟ್ಟಿ ಭಾರತೀಯ ಚಿತ್ರರಂಗದ ಅದ್ಭುತ ನಟ. ಹಲವು ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ತಮ್ಮ ವಿಶಿಷ್ಟ ಅಭಿನಯದಿಂದ ಪ್ರೇಕ್ಷಕರಿಗೆ ಹತ್ತಿರ ವಾಗಿದ್ದಾರೆ. ಮಮ್ಮುಟ್ಟಿ ತಮ್ಮ ತಾಯಿಯ ಸಾವಿನ ನಂತರ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಏಜೆಂಟ್ ಚಿತ್ರದ ಪ್ರಚಾರದಿಂದ ದೂರ ಉಳಿಯ ಲಿದ್ದಾರೆ ಎಂದು ವರದಿಯಾಗಿದೆ.

ಏ.28ರಂದು ತೆಲುಗು ಜೊತೆಗೆ ಮಲಯಾಳಂನಲ್ಲೂ ಸಿನಿಮಾ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಮಮ್ಮುಟ್ಟಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.