Sunday, 11th May 2025

ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ…?

ಹೈದರಾಬಾದ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮೆದಕ್ ಅಥವಾ ಮಹೆಬೂಬ್ನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಆಲೋಚನೆಯನ್ನು ಪಕ್ಷದ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿದುಬಂದಿದೆ.
ಅಜ್ಜಿ ಹಾದಿಯಲ್ಲಿ ಮೊಮ್ಮಗಳು ಕಾಂಗ್ರೆಸ್ ಹೈಕಮಾಂಡ್ ಪ್ರಿಯಾಂಕಾ ಗಾಂಧಿ ಉಮೇದು ವಾರಿಕೆಯನ್ನು ಅಂತಿಮಗೊಳಿಸಿದರೆ, ಅವರು ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣ ದಿಂದ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯ ಪ್ರವೇಶಿಸಲಿದ್ದಾರೆ.
ಈ ಮೂಲಕ 1980 ರಲ್ಲಿ ಮೆದಕ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅಜ್ಜಿ ಇಂದಿರಾ ಗಾಂಧಿಯವರ ಹಾದಿಯಲ್ಲಿ ಪ್ರಿಯಾಂಕಾ ಸಾಗಲಿದ್ದಾರೆ.