Wednesday, 14th May 2025

ವಿದೇಶದಿಂದ ಹೆರಾಯಿನ್​​ ಸಾಗಾಟ ಮಾಡುತ್ತಿದ್ದ ಮಹಿಳೆ ಬಂಧನ

ಹೈದರಾಬಾದ್​: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕೆಯೊಬ್ಬರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 42 ಕೋಟಿ ರೂ ಮೌಲ್ಯದ ಹೆರಾಯಿನ್ (ಮಾದಕ ವಸ್ತು) ಅನ್ನು ಪತ್ತೆ ಹಚ್ಚಿ ವಶಕ್ಕೆ ಪಡೆ ಯಲಾಗಿದೆ.

5.90 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶ ನಾಲಯ (ಡಿಆರ್‌ಐ) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಲಾವಿಯಿಂದ ದೋಹಾ ಮೂಲಕ ಹೈದರಾಬಾದ್‌ಗೆ ಆರೋಪಿ ಮಹಿಳೆ ಬಂದಿಳಿದಿದ್ದರು. ಆರೋಪಿ ಯನ್ನು ಎನ್‌ಡಿ ಪಿಎಸ್ ಕಾಯ್ದೆ, 1985 ರ ನಿಬಂಧನೆಗಳ ಅಡಿಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಸ್ಸಾಂನ ಕರ್ಬಿ ಆಂಗ್ಲಾಂಗ್ಜಿಲ್ಲೆಯಲ್ಲಿ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಸುಮಾರು 20 ಕೋಟಿ ರೂ. ಮೌಲ್ಯದ 5 ಕೆಜಿ ಹೆರಾಯಿನ್ ಅನ್ನು ಇತ್ತೀಚೆಗೆ ಪೊಲೀಸರು ಮತ್ತು ಸಿಆರ್‌ ಪಿಎಫ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದರು. ವಾಹನದ ಸಂಪೂರ್ಣ ತಪಾಸಣೆ ನಡೆಸಿದ್ದು ಹೆರಾಯಿನ್ ಹೊಂದಿದ್ದ 390 ಸೋಪ್ ಕೇಸ್‌ಗಳನ್ನು ವಶಪಡಿಸಿಕೊಳ್ಳ ಲಾಗಿತ್ತು.