Wednesday, 14th May 2025

ಮಧ್ಯಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ವಾಪಸ್‌

ಭೋಪಾಲ್‌ : ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವ ನಿರ್ಧಾರವನ್ನು ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ಹಿಂಪಡೆದಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮಾಧ್ಯಮ ಘಟಕದ ಅಧ್ಯಕ್ಷ ಕೆ.ಕೆ.ಮಿಶ್ರಾ ಹೇಳಿದ್ದಾರೆ.

‘ನಿಯಮಗಳ ಪ್ರಕಾರ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣಪತ್ರ ಹೊಂದಿರುವ ಚಲನಚಿತ್ರಗಳಿಗೆ ಮನರಂಜನಾ ತೆರಿಗೆ ಯಿಂದ ವಿನಾಯಿತಿ ನೀಡಲಾಗುವುದಿಲ್ಲ. ಈ ಕಾರಣಕ್ಕಾಗಿಯೇ ರಾಜ್ಯ ಸರ್ಕಾರ ‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ನೀಡಿರುವ ತೆರಿಗೆ ವಿನಾಯಿತಿಯನ್ನು ಹಿಂಪಡೆದಿದೆ’ ಎಂದು ಕೆ.ಕೆ.ಮಿಶ್ರಾ ಹೇಳಿದ್ದಾರೆ.