Sunday, 11th May 2025

ನೀಡಿದ ಭರವಸೆಗಳನ್ನು ಈಡೇರಿಸದೇ ಹೋದರೆ ಧರಣಿ: ಬಿ.ಸಿ ಪಾಟೀಲ್

ಹಾವೇರಿ: ನಾನು ಜನರ ತೀರ್ಪಿಗೆ ತಲೆ ಬಾಗುತ್ತೇನೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ಮಾರು ಹೋಗಿ ಜನರು ಬಹುಮತ ನೀಡಿದ್ದಾರೆ. ನೀಡಿದ ಭರವಸೆಗಳನ್ನು ಈಡೇರಿಸದೇ ಹೋದರೆ ಧರಣಿ ನಡೆಸುವುದಾಗಿ ಮಾಜಿ ಸಚಿವ ಬಿ.ಸಿ ಪಾಟೀಲ್ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಮಾತನಾಡಿ, ಸೋಲು ಗೆಲುವು ಸಾಮಾನ್ಯ. ಜನರ ತೀರ್ಪಿಗೆ ನಾವು ತಲೆಬಾಗುತ್ತೇವೆ. ಒಳ ಮೀಸಲಾತಿ ವಿಚಾರದಲ್ಲಿ ತಾಂಡಾಗಳಲ್ಲಿ ನಮಗೆ ಮತ ಸಿಕ್ಕಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಗ್ಯಾರಂಟಿಗೆ ಜನ ಮರುಳಾಗಿದ್ದಾರೆ. ಕಾಂಗ್ರೆಸ್ ನ ಭರವಸೆಗಳ ಮೇಲೆ ನಂಬಿಕೆ ಇಟ್ಟು ಮತ ನೀಡಿದ್ದಾರೆ. ಕೊಟ್ಟ ಮಾತಿನಂತೆ ನಡೆಯದಿದ್ದರೆ ಕಾಂಗ್ರೆಸ್ ವಿರುದ್ಧ ಧರಣಿ ಮಾಡುವುದಾಗಿ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಬಿ.ಸಿ ಪಾಟೀಲ್ ಎಚ್ಚರಿಕೆ ನೀಡಿದರು.