Saturday, 10th May 2025

ಶಕ್ತಿ ಯೋಜನೆ ಉದ್ಘಾಟನೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್’ಗೆ ಆಹ್ವಾನ

Nirmala Sitharaman

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಸಿಎಂ ಸಿದ್ದರಾಮಯ್ಯ ಅವರು ಜೂನ್ 11 ರ ನಾಳೆ ಚಾಲನೆ ನೀಡಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೂ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಲಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಆಹ್ವಾನಿಸಲಾಗಿದೆ.

ಮಹಿಳೆಯರಿಗಾಗಿ ಸಾರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ಜೂನ್ 11 ರ ನಾಳೆಯಿಂದ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.

ಶಕ್ತಿ ಯೋಜನೆ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಜೂನ್ 11ರಂದು ಮಧ್ಯಾಹ್ನ 01 ಗಂಟೆಯಿಂದ ಅನ್ವಯವಾಗುವಂತೆ ಜಾರಿ ಗೊಳಿಸಲಾಗುತ್ತಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಎಲ್ಲಾ ಗುರುತಿನ ಚೀಟಿಗಳಲ್ಲಿ ಯಾವುದಾದರು ಒಂದನ್ನು ತೋರಿಸಿ ‘ಶೂನ್ಯ ಮೊತ್ತದ ಟಿಕೇಟ್” ಪಡೆದು ಮಹಿಳೆಯರು ಜೂನ್ 11ರ ಮಧ್ಯಾಹ್ನ 01 ಗಂಟೆಯಿಂದ ಉಚಿತ ಸಾರಿಗೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು.