Tuesday, 13th May 2025

ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್‌ ರಾಜೀನಾಮೆ ನೀಡಲ್ಲ…!

ಇಂಫಾಲ: ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ ಶುಕ್ರವಾರ ರಾಜೀನಾಮೆ ಸಲ್ಲಿಸುತ್ತಿಲ್ಲ ಎಂದು ಹೇಳಲಾಗಿದೆ.

ಬಿರೇನ್ ಸಿಂಗ್ ಮತ್ತು ರಾಜ್ಯಪಾಲೆ ಅನುಸೂಯಾ ಉಯ್ಕೆ ಭೇಟಿಗೆ ಸಮಯ ನಿಗದಿ ಯಾಗಿತ್ತು. ಆ ಸಂದರ್ಭದಲ್ಲೇ ರಾಜೀನಾಮೆ ಪತ್ರ ಸಲ್ಲಿಕೆಯಾಗಬಹುದು ಎಂದು ಮೂಲಗಳು ಹೇಳಿದ್ದವು.

ಹೇಳಿವೆ. ಹಿಂಸಾಚಾರ ನಿಯಂತ್ರಿಸುವಲ್ಲಿ ಬಿರೇನ್‌ ವಿಫಲರಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತ ಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ರಾಜ್ಯದಾದ್ಯಂತ ತೆರೆಯಲಾಗಿರುವ 300 ಪರಿಹಾರ ಕೇಂದ್ರಗಳಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.

Leave a Reply

Your email address will not be published. Required fields are marked *