Wednesday, 14th May 2025

ಪ್ರತಿಕೂಲ ಹವಾಮಾನ: ಅಮರನಾಥ ಯಾತ್ರೆ ಸ್ಥಗಿತ

ಅಮರನಾಥ: ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆ ಸುರಿದ ಕಾರಣ ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ಶುಕ್ರವಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಯಾತ್ರೆಯನ್ನು ಸ್ಥಗಿತಗೊಳಿಸ ಲಾಗಿದೆ. ಪವಿತ್ರ ಗುಹಾ ದೇಗುಲದ ಕಡೆಗೆ ಯಾವುದೇ ಯಾತ್ರಿಕರಿಗೆ ತೆರಳಲು ಅವಕಾಶ ನೀಡುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಂಬನ್ ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮೋಹಿತಾ ಶರ್ಮಾ, ಜಿಲ್ಲೆಯ ಚಂದರಕೋಟೆ ಪ್ರದೇಶದಲ್ಲಿ ಯಾತ್ರೆಯನ್ನು ಸ್ಥಗಿತ ಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಹಲ್ಗಾಮ್ ಬೆಲ್ಟ್ ನಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಯಾತ್ರೆಯನ್ನು ಸ್ಥಗಿತ ಗೊಳಿಸಲಾಗಿದೆ ಎಂದು ಶರ್ಮಾ ತಿಳಿಸಿದರು.

ಭಾರೀ ಮಳೆಯಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲ್ಟಾಲ್ ಮತ್ತು ನುನ್ವಾನ್ ಬೇಸ್ ಕ್ಯಾಂಪ್ಗಳಲ್ಲಿ ಯಾತ್ರಾರ್ಥಿ ಗಳನ್ನು ನಿಲ್ಲಿಸಲಾಗಿದೆ. ಪಹಲ್ಗಾಮ್ ಬೇಸ್ ಕ್ಯಾಂಪ್ಗೆ ತೆರಳುತ್ತಿದ್ದ 4,600 ಯಾತ್ರಾರ್ಥಿಗಳ ತಂಡವನ್ನು ಚಂದ ರ್ಕೋಟ್ನಲ್ಲಿ ನಿಲ್ಲಿಸಲಾಗಿದ್ದು, ಬಲ್ಟಾಲ್ ಶಿಬಿರಕ್ಕೆ ಪ್ರಯಾಣಿಸುವ 2,410 ಭಕ್ತರ ಮತ್ತೊಂದು ಗುಂಪನ್ನು ಮುಂದುವರಿಸಲು ಅನುಮತಿಸಲಾಗಿದೆ. ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭ ವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *