Wednesday, 14th May 2025

UGC NET ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ದೇಶದ ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕ, ಜೂನಿಯರ್ ರಿಸರ್ಚ್ ಫೆಲೋಶಿಪ್ ಗಾಗಿ ‘ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC NET) ಡಿಸೆಂಬರ್ 2023 ಪರೀಕ್ಷಾ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ.

ಯುಜಿಸಿ ನೆಟ್ ಪರೀಕ್ಷೆಗಳನ್ನ ಡಿಸೆಂಬರ್ 6 ರಿಂದ 14 ರವರೆಗೆ ಪ್ರಮುಖ ನಗರಗಳ ಕೇಂದ್ರಗಳಲ್ಲಿ ನಡೆಸಲಾಗುವುದು. ಪರೀಕ್ಷೆಗಳ ಫಲಿತಾಂಶಗಳನ್ನ ಜನವರಿ 10, 2024 ರಂದು ಪ್ರಕಟಿಸಲಾಗುವುದು.

ಪರೀಕ್ಷಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳ ಸಂದರ್ಭದಲ್ಲಿ ದೂರವಾಣಿ ಸಂಖ್ಯೆ 011-40759000 ಅಥವಾ ಇಮೇಲ್: ugcnet@nta.ac.inನ್ನ ಸಂಪರ್ಕಿಸಬಹುದು.

ಪರೀಕ್ಷೆಯ ಪ್ರವೇಶ ಕಾರ್ಡ್‌ಗಳನ್ನು ಪರೀಕ್ಷೆಯ 10 ದಿನಗಳ ಮೊದಲು ಲಭ್ಯವಿರುತ್ತದೆ. ಎಲ್ಲಾ 83 ವಿಷಯಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಯನ್ನು ನಡೆಸಲಾಗುತ್ತದೆ. ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷಾ ವಿಧಾನವನ್ನ ಒಳಗೊಂಡಿರುತ್ತದೆ. ಪರೀಕ್ಷೆಗಳನ್ನು ಪ್ರತಿದಿನ ಎರಡು ಅವಧಿ ಗಳಲ್ಲಿ ನಡೆಸಲಾಗುತ್ತದೆ. ಮೊದಲ ಪಾಳಿಯಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಎರಡನೇ ಪಾಳಿಯಲ್ಲಿ ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಪರೀಕ್ಷೆಗಳು ನಡೆಯಲಿವೆ.

Leave a Reply

Your email address will not be published. Required fields are marked *