Saturday, 10th May 2025

ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಬಂಧನ

ಚಿತ್ರದುರ್ಗ: ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.

ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆ ಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ನ್ಯಾಯಧೀಶರಾದ ಬಿ ಕೆ ಕೋಮಲಾ ಅವರು ಬಂಧನ ವಾರೆಂಟ್ ಆದೇಶ ಹೊರಡಿಸಿದ್ದರು.

ಚಿತ್ರದುರ್ಗದ ಡಿವೈಎಸ್ಪಿ ಅನಿಲ್ ಕುಮಾರ್, ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪಿಐ ಮುದ್ದು ರಾಜ್ ನೇತೃತ್ವದ ತಂಡವು ದಾವಣಗೆರೆ ನಗರದ ದೊಡ್ಡಪೇಟೆಯಲ್ಲಿರುವ ವಿರಕ್ತ ಮಠದಲ್ಲಿ ಮುರುಘಾ ಶರಣರನ್ನು ಬಂಧಿಸಿದ್ದಾರೆ. ಈ ವೇಳೆ ಭಾರಿ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ದಾವಣಗೆರೆ ಯಿಂದ ಶ್ರೀಗಳನ್ನು ಬಂಧಿಸಿ ಚಿತ್ರದುರ್ಗದತ್ತ ಪೊಲೀಸರು ತೆರಳಿದರು.

Leave a Reply

Your email address will not be published. Required fields are marked *