Thursday, 15th May 2025

ಅಶ್ಲೀಲ ವಿಡಿಯೋ ಮಾಡಿ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ

pocso case

ಮಥುರಾ: ಉತ್ತರಪ್ರದೇಶದ ಮಥುರಾದಲ್ಲಿ ಗೆಳೆಯನೊಂದಿಗೆ ಇದ್ದಾಗ ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್​​ಮೇಲ್​ ಮಾಡಿದ್ದಕ್ಕಾಗಿ ಮನನೊಂದ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಡಿಸೆಂಬರ್ 6 ರಂದು ಸಂಜೆ 4 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಮೂರನೇ ಮಹಡಿಯಿಂದ ಜಿಗಿದಿದ್ದಾಳೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಯನ್ನ ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡಿ ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಎರಡು ದಿನಗಳ ನಂತರ ವಿದ್ಯಾರ್ಥಿಗೆ ಪ್ರಜ್ಞೆ ಬಂದಿದೆ. ಇದರ ನಂತರ, ವಿದ್ಯಾರ್ಥಿನಿಯು ತನಗೆ ದುಷ್ಕರ್ಮಿಗಳು ಬೆದರಿಕೆ ಹಾಕುತ್ತಿರುವ ಬಗ್ಗೆ ಕುಟುಂಬಕ್ಕೆ ತಿಳಿಸಿದ್ದಾಳೆ.

ವಿದ್ಯಾರ್ಥಿನಿ ಮಥುರಾ ಜಿಲ್ಲೆಯ ಹೈವೇ ಪೊಲೀಸ್ ಠಾಣೆ ವ್ಯಾಪ್ತಿಯ ವಿಕಾಸ್ ನಗರ ಕಾಲೋನಿಯಲ್ಲಿರುವ ಕೆಫೆಗೆ ಸ್ನೇಹಿತನೊಂದಿಗೆ ಹೋಗಿದ್ದಳು. ಕೆಫೆಯ ನಿರ್ವಾಹಕ ಮತ್ತ ಸಿಬ್ಬಂದಿ ಇವರಿಬ್ಬರ ಅಶ್ಲೀಲ ವಿಡಿಯೋ ಮಾಡಿದ ಆರೋಪವಿದೆ. ನಂತರ ಅವರು ವಿದ್ಯಾರ್ಥಿನಿಗೆ ಬ್ಲ್ಯಾಕ್​ಮೇಲ್ ಮಾಡಲು ಪ್ರಾರಂಭಿಸಿದ್ದಾರೆ.

Leave a Reply

Your email address will not be published. Required fields are marked *