Thursday, 15th May 2025

ಗುಟ್ಕಾ ಜಾಹೀರಾತು: ಮೂವರು ಬಾಲಿವುಡ್ ನಟರಿಗೆ ನೋಟಿಸ್

ಲಖನೌ: ಗುಟ್ಕಾ ಕಂಪನಿಗಳಿಗೆ ಜಾಹೀರಾತು ಸಂಬಂಧ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ನ್ಯಾಯಾಂಗ ನಿಂದನೆ ಅರ್ಜಿಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರವು ಅಲಹಾಬಾದ್ ನ್ಯಾಯಾ ಲಯದ ಲಖನೌ ಪೀಠಕ್ಕೆ ಮಾಹಿತಿ ನೀಡಿತು.

ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ವಿಚಾರಣೆ ನಡೆಯುತ್ತಿದ್ದು, ಈ ಮನವಿ ಆಲಿಸಿದ ನಂತರ ಪೀಠ ವಿಚಾರಣೆಯನ್ನು ಮೇ 9, 2024ಕ್ಕೆ ನಿಗದಿಪಡಿಸಿದೆ.

ಗುಟ್ಕಾ ಕಂಪನಿಗಳ ಜಾಹೀರಾತಿನಲ್ಲಿ ಪಾಲ್ಗೊಂಡಿರುವ ನಟರು ಮತ್ತು ಗಣ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಾದಿಸಿರುವ ಅರ್ಜಿದಾರರ ಪ್ರಾತಿನಿಧ್ಯವನ್ನು ನಿರ್ಧರಿಸುವಂತೆ ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಅವರಿದ್ದ ಪೀಠವು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅಕ್ಟೋಬರ್ 22ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

ಆ ಬಳಿಕ, ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತ್ತು.

ಇನ್ನೊಂದೆಡೆ, ಅಮಿತಾಬ್ ಬಚ್ಚನ್ ಅವರು ಗುಟ್ಕಾ ಕಂಪನಿಯೊಂದಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಅವರು ಈಗಾಗಲೇ ತಮ್ಮ ಒಪ್ಪಂದವನ್ನು ರದ್ದುಗೊಳಿಸಿದ್ದರೂ ಸಹ ಅವರ ಜಾಹೀರಾತು ತೋರಿಸಲಾಗುತ್ತಿದೆ.

Leave a Reply

Your email address will not be published. Required fields are marked *