Wednesday, 14th May 2025

ಧಗ ಧಗ ಉರಿದ ತೆಲುಗು ದೇಶಂ ಪಕ್ಷದ ಕಚೇರಿ

ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಈ ಘಟನೆಯ ಹಿಂದೆ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ‘ಸೇಡಿನ ರಾಜಕಾರಣ’ ಅಡಗಿದೆ ಎಂದು ಪಕ್ಷ ಆರೋಪಿಸಿದೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಭಾನುವಾರ ತಡರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ.

ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಪೆಡಕುರಪಾಡುದಲ್ಲಿ ಸಾರ್ವಜನಿಕ ಸಭೆಯನ್ನು ಮುಗಿಸಿದ ಕೂಡಲೇ ಈ ಘಟನೆ ಸಂಭವಿಸಿದೆ.

ಟಿಡಿಪಿ ಮುಖಂಡ ಮತ್ತು ಪೆದಕೂರಪಾಡು ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಭಾಷ್ಯಂ ಪ್ರವೀಣ್, ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡರು. ಈ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸು ವಂತೆ ಕಾನೂನು ಜಾರಿ ಅಧಿಕಾರಿಗಳಿಗೆ ಒತ್ತಾಯಿಸಿದರು.

ಟಿಡಿಪಿ ಹಾಗೂ ವೈಎಸ್​ಆರ್​ಸಿಪಿ ನಡುವಿನ ಮುಖಾಮುಖಿ ಈಗ ಉಲ್ಬಣಗೊಡಿದೆ. ಆಂಧ್ರಪ್ರದೇಶದಲ್ಲಿ ಮೇ 13ರಂದು ಚುನಾವಣೆ ನಡೆಯಲಿದೆ.

Leave a Reply

Your email address will not be published. Required fields are marked *