Sunday, 11th May 2025

ಈ ನಾಲ್ಕು ನಗರಗಳಲ್ಲಿ ನಾಳೆ ಭಾರಿ ಪ್ರಮಾಣದಲ್ಲಿ ಮಳೆ ಸಾಧ್ಯತೆ…!

ಬೆಂಗಳೂರು: ತುಸು ಇಳಿಮುಖವಾಗಿದ್ದ ಮಳೆ ಮಂಡ್ಯ,ಹಾಸನ,ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ಸುರಿದಿದೆ. ಬೆಂಗಳೂರು ಸೇರಿ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು, ಮಧ್ಯಾಹ್ನ ಬಳಿಕ ಬಿಸಿಲು ವಾತಾವರಣ ಕಂಡುಬಂದಿತ್ತು. ಕೆಲವೆಡೆ ಸಾಧಾರಣ ಮಳೆಯಾಯಿತು.

ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಆ.11ರಂದು ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಆ.12ರಿಂದ ಮೇಲಿನ ಜಿಲ್ಲೆಗಳಲ್ಲಿ ಮಳೆ ಕ್ಷೀಣವಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು,ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮುಂದಿನ ಐದು ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.

Leave a Reply

Your email address will not be published. Required fields are marked *