Saturday, 10th May 2025

POCSO Case: ಬಾಲಕಿಯರ ನಗ್ನ ಫೋಟೋ ತಂದುಕೊಡುವಂತೆ ಒತ್ತಾಯಿಸುತ್ತಿದ್ದ ಕಾಮುಕ ಶಿಕ್ಷಕ!

Physical Abuse

ಚಿಕ್ಕೋಡಿ: ಬಾಲಕಿಯರಿಗೆ ಲೈಂಗಿಕ ಕಿರುಕುಳ (Physical abuse) ನೀಡುತ್ತಿದ್ದ, ಅವರ ನಗ್ನ ಫೋಟೋ ತೆಗೆದು ತಂದುಕೊಡುವಂತೆ ಒತ್ತಾಯಿಸುತ್ತಿದ್ದ ಕಾಮುಕ ಶಿಕ್ಷಕನನ್ನು ಚಿಕ್ಕೋಡಿ (Chikkodi crime news) ಠಾಣೆಯ ಪೊಲೀಸರು ಪೋಕ್ಸೋ ಪ್ರಕರಣ (POCSO Case) ದಾಖಲಿಸಿ ಬಂಧಿಸಿದ್ದಾರೆ.

ಸರ್ಕಾರಿ ಶಾಲೆಯ ಶಿಕ್ಷಕನಾಗಿರುವ ಆರೋಪಿ ಸಾದಿಕ್ ಬೇಗ್ ಎಂಬಾತನನ್ನು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿ ಸಣ್ಣ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಯರಿಗೆ ಮುಟ್ಟಬಾರದ ಜಾಗದಲ್ಲಿ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶೌಚಕ್ಕೆ ಹೋಗಿದ್ದಾಗ ಪ್ರೈವೇಟ್ ಪಾರ್ಟ್ ಫೋಟೋ ತೆಗೆದುಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಫೋಟೋಗಳನ್ನು ಮೊಬೈಲ್‌ನಲ್ಲಿ ಸೇವ್ ಮಾಡಿಕೊಂಡು ವಿಕೃತಿ ಮೆರೆಯುತ್ತಿದ್ದ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಕ್ಕಳ ಹೇಳಿಕೆ ಕೇಳಿ ಪೋಷಕರು ಮತ್ತು ಪೊಲೀಸರು ಶಾಕ್ ಆಗಿದ್ದಾರೆ. ಪಾಠ ಮಾಡುವುದನ್ನು ಬಿಟ್ಟು ವಿಕೃತಿ ಮೆರೆಯುತ್ತಿದ್ದ ಈತನ ಕೃತ್ಯ, ಓರ್ವ ಬಾಲಕಿ ತಾಯಿಯ ಗಮನಕ್ಕೆ ತಂದಾಗ ಬೆಳಕಿಗೆ ಬಂದಿದೆ. ಸುಮಾರು 30ಕ್ಕೂ ಹೆಚ್ಚು ಬಾಲಕಿಯರ ಮೇಲೆ ಕಳೆದ ಒಂದು ವರ್ಷದಿಂದ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ.

ಶುಕ್ರವಾರ ಸಂಜೆ ಅಳುತ್ತಾ ಮನೆಗೆ ಬಂದಿದ್ದ ಬಾಲಕಿಯನ್ನು ಪೋಷಕರು ಪ್ರಶ್ನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಬಾಲಕಿಯ ತಂದೆ ಇತರೆ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಅನೇಕ ವಿದ್ಯಾರ್ಥಿನಿಯರಿಗೆ ಶಿಕ್ಷಕ ಹೀಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಉಳಿದ ಪೋಷಕರು ಕೂಡ ದೂರು ನೀಡಲು ಮುಂದಾಗಿದ್ದಾರೆ. ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mangalore News: ಮಸೀದಿ ಮೇಲೆ ಕಲ್ಲು ತೂರಾಟ, ಸುರತ್ಕಲ್‌ನಲ್ಲಿ ಆತಂಕ

Leave a Reply

Your email address will not be published. Required fields are marked *