Saturday, 10th May 2025

ಮಠದಲ್ಲಿ ಅತಿಥಿ ಗೃಹ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ 

ತುಮಕೂರು: ಸಿದ್ಧಗಂಗಾ ಮಠ(Siddaganga Mutt) ದ ಆವರಣದಲ್ಲಿರುವ ಯಾತ್ರಿ ನಿವಾಸದ ಪಕ್ಕ ಅತಿಥಿ ಗೃಹ ನಿರ್ಮಾಣಕ್ಕೆ ಸಚಿವ ಪರಮೇಶ್ವರ್ (Minister Parameshwwar)ಶಂಕುಸ್ಥಾಪನೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಸಾವಿರಾರು ಭಕ್ತಾದಿಗಳು ಹಾಗೂ ಗಣ್ಯ ವ್ಯಕ್ತಿಗಳು ತಂಗಲು ಅನುಕೂಲವಾಗುವಂತೆ ಸುಮಾರು 4.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಅತಿಥಿ ಗೃಹ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ನಗರ ಶಾಸಕ ಜ್ಯೋತಿ ಗಣೇಶ್, ಗ್ರಾಮಾಂತರ ಶಾಸಕ ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: JDU: ರಾಜ್ಯಾದ್ಯಂತ ಜೆಡಿಯು ಪಕ್ಷ ಸಂಘಟನೆ – ಮಹಿಮ ಪಟೇಲ್

Leave a Reply

Your email address will not be published. Required fields are marked *