Wednesday, 14th May 2025

Accident: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ, ಮೂವರು ವಿದ್ಯಾರ್ಥಿಗಳ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ.

ನಿತೀಶ್(೧೭) ನಿತಿನ್(೧೭) ಹಾಗೂ ವೈಭವ್ ಮೃತರು. ಇವರು ಶಾಲೆ ಹಾಗೂ ಕಾಲೇಜಿನಿಂದ ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ವಿದ್ಯಾರ್ಥಿಗಳು ಅಪಘಾತಕ್ಕೆ ತುತ್ತಾಗಿದ್ದಾರೆ. ಟ್ಯೂಷನ್ ಮುಗಿಸಿಕೊಂಡು ಮೂವರು ಒಂದೇ ಬೈಕಿನಲ್ಲಿ ತೆರಳುತ್ತಿದ್ದರು.

ಬಿಜಿಎಸ್ ಶಾಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನಿತಿಶ್ ಮತ್ತು ಹಾಗೂ ನಿತಿನ್. ಬಿಜಿಎಸ್ ಕಾಲೇಜಿನಲ್ಲಿ ಓದುತ್ತಿದ್ದರು. ಮತ್ತೊಬ್ಬ ವಿದ್ಯಾರ್ಥಿ ವೈಭವ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದರು.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Accident News : ಟ್ರಕ್, ಆಟೋ ನಡುವೆ ಅಪಘಾತ, ಏಳು ಮಂದಿ ಸಾವು