Wednesday, 14th May 2025

Superstar Rajinikanth: ಸೂಪರ್‌ ಸ್ಟಾರ್‌ ಆರೋಗ್ಯದಲ್ಲಿ ಚೇತರಿಕೆ; 2-3 ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Rajinikanth

ಚೆನ್ನೈ: ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ (Superstar Rajinikanth) ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಅವರ ಅವರ ಸ್ಥಿತಿ ಸ್ಥಿರವಾಗಿದೆ. ಮೂರರಿಂದ ನಾಲ್ಕು ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, 2-3 ದಿನಗಳಲ್ಲಿ ಅವರನ್ನು ಆಸ್ಪತ್ರೆಯಿ‍ಂದ ಡಿಸ್ಚಾರ್ಜ್‌ ಮಾಡಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್‌ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ಸೋಮವಾರ ರಾತ್ರಿ ಏಕಾಏಕಿ ದಾಖಲಿಸಲಾಗಿದೆ. 73 ವರ್ಷದ ನಟನ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಗಳ ಮೂಲಗಳು ತಿಳಿಸಿವೆ. ಹೃದ್ರೋಗ ತಜ್ಞ ಡಾ.ಸಾಯಿ ಸತೀಶ್ ಅವರು ನಟನಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಂಗಳವಾರ ಕಾರ್ಡಿಯಾಕ್ ಕ್ಯಾಥ್ ಲ್ಯಾಬ್ ನಲ್ಲಿ ಅವರಿ ವಿಶೇಷ ಪರೀಕ್ಷೆ ಮಾಡಲಾಗುತ್ತದೆ ಎಂದು ಆಸ್ಪತ್ರೆ ತಿಳಿಸಿದೆ.

ಈ ನಡುವೆ ನೆಚ್ಚಿನ ನಾಯಕ ಅಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರು ಶೀಘ್ರವಾಗಿ ಗುಣಮುಖರಾಗುವಂತೆ ಕೋಟ್ಯಂತರ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸಾಮಾಜಿಕ ಜಾಲತಾಣದ ಮೂಲಕ ತಲೈವಾ ಬೇಗ ಗುಣಮುಖರಾಗಿಬನ್ನಿ ಎಂದು ಅನೇಕರು ಹಾರೈಸಿದ್ದರು. ಇದೀಗ ರಜಿನಿ ಪತ್ನಿ ಲತಾ ತಲೈವಾ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಮಾಧ್ಯಮದ ಜತೆ ಮಾಹಿತಿ ಹಂಚಿಕೊಂಡಿದ್ದು, ಕೋಟ್ಯಂತರ ಅಭಿಮಾನಿಗಳ ಹಾರೈಕೆಯಿಂದ ರಜಿನಿಕಾಂತ್‌ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಅದೇಷ್ಟೋ ಅಭಿಮಾನಗಳು ಅವರು ಶೀಘ್ರವೇ ಗುಣಮುಖರಾಗುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಭಿಮಾನಿಗಳ ಪ್ರೀತಿ, ಹಾರೈಕೆಯಿಂದಾಗಿಯೇ ಅವರು ಬೇಗ ಚೇತರಿಸಿಕೊಳ್ಳಲು ಸಾಧ್ಯವಾಯಿತು. ಎಲ್ಲರಿಗೂ ಧನ್ಯವಾದಗಳು ಎಂದು ಲತಾ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಲೈವರ್” ಎಂದು ಪ್ರೀತಿಯ ಹೆಸರು ಹೊಂದಿರುವ ರಜನಿಕಾಂತ್ ಭಾರತೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರು. ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನವನ್ನು ಹೊಂದಿದ್ದರು. ಅವರ ಇತ್ತೀಚಿನ ಸಿನಿಮಾ ಆಕ್ಷನ್-ಕಾಮಿಡಿ ಜೈಲರ್. ಆಗಸ್ಟ್ 9, 2023 ರಂದು ಬಿಡುಗಡೆಯಾಗಿತ್ತು. ಅದು ಬಾಕ್ಸ್ ಆಫೀಸ್‌ನಲ್ಲಿ ಗೆದ್ದಿತ್ತು.

ರಜನಿಕಾಂತ್ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ‘ವೆಟ್ಟೈಯಾನ್’ ನ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. .ಅವರು ವೈರಲ್ ಡಾನ್ಸ್ ಮಾಡಿದ್ದರು. ಟಿಜೆ ಜ್ಞಾನವೇಲ್ ನಿರ್ದೇಶನದ ವೆಟ್ಟೈಯನ್ ಆಕ್ಷನ್ ಪ್ಯಾಕ್ಡ್ ಮನರಂಜನಾ ಚಿತ್ರವಾಗಿದೆ. ಅಕ್ಟೋಬರ್ 10 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಈ ಸುದ್ದಿಯನ್ನೂ ಓದಿ: ರಜಿನಿಕಾಂತ್‌ ಅಭಿನಯದ ʼವೆಟ್ಟೈಯನ್‌ʼ ರಿಲೀಸ್‌ಗೆ ಡೇಟ್‌ ಫಿಕ್ಸ್‌