Friday, 16th May 2025

Crime News : ಎನ್‌ಸಿಪಿ ಅಜಿತ್ ಪವಾರ್‌ ಬಣದ ಯುವ ನಾಯಕ ಕೊಲೆ

Crime News

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) -ಅಜಿತ್ ಪವಾರ್ ಬಣದ ನಾಯಕ ಸಚಿನ್ ಕುರ್ಮಿಯನ್ನು ಅಪರಿಚಿತ ವ್ಯಕ್ತಿಗಳು ಶುಕ್ರವಾರ ಹತ್ಯೆ (Crime News) ಮಾಡಿದ್ದಾರೆ. ಆರಂಭಿಕ ವರದಿ ಪ್ರಕಾರ ಕುರ್ಮಿಯನ್ನು ಮುಂಬೈನ ಬೈಕುಲ್ಲಾ ಪ್ರದೇಶದ ಎಂಎಚ್ಎಡಿಎ ಕಾಲೋನಿ ಹಿಂಭಾಗದಲ್ಲಿ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಸಚಿನ್ ಕುರ್ಮಿ ಹತ್ಯೆ ಪ್ರಕರಣದಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮುಂಬೈ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಸಚಿನ್ ಕುರ್ಮಿ ಅವರನ್ನು ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಕಳೆದ ರಾತ್ರಿ ಅಪರಿಚಿತ ವ್ಯಕ್ತಿಗಳು ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ,

ಸಚಿನ್ ಕುರ್ಮಿ ಮೇಲಿನ ದಾಳಿಗೆ ಯಾರು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ 2 ರಿಂದ 3 ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಅವರು ನಂಬಿದ್ದಾರೆ.

ಇದನ್ನೂ ಓದಿ: Jammu and Kashmir : ಜಮ್ಮು ಮತ್ತು ಕಾಶ್ಮೀರದ ಕಪ್ವಾರಾದಲ್ಲಿ ಇಬ್ಬರು ಉಗ್ರರು ಎನ್ಕೌಂಟರ್‌ನಲ್ಲಿ ಹತ್ಯೆ

ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಗೊಂಡ ಸಚಿನ್ ಅವರನ್ನು ಹತ್ತಿರದ ಜೆಜೆ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಕುರ್ಮಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪೊಲೀಸರು ಶವವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.