Friday, 16th May 2025

Drugs Siezed: ಸಿಸಿಬಿ ಪೊಲೀಸರ ಭರ್ಜರಿ ಬೇಟೆ; 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ

Drugs Siezed

ಮಂಗಳೂರು: ಕೇಂದ್ರ ಅಪರಾಧ ವಿಭಾಗ (CCB)ದ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಆ ಮೂಲಕ ಅತಿದೊಡ್ಡ ಡ್ರಗ್ಸ್‌ ಜಾಲವನ್ನು ಬೇಧಿಸಿದ್ದಾರೆ. ರಾಜ್ಯದ ವಿವಿಧಡೆ ಡ್ರಗ್​​ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜತೆಗೆ ಆತನಿಂದ 6 ಕೋಟಿ ರೂ. ಮೌಲ್ಯದ 6 ಕೆ.ಜಿ. ಎಂಡಿಎಂ ಡ್ರಗ್ ವಶಪಡಿಸಿಕೊಂಡಿದ್ದಾರೆ (Drugs Siezed).

ಪ್ರಕರಣದ ಹಿನ್ನೆಲೆ

ಈ ಬಗ್ಗೆ ಮಾಹಿತಿ ನೀಡಿದ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ʼʼಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಇತಿಹಾಸದಲ್ಲೇ ದೊಡ್ಡ ಮೌಲ್ಯದ ಡ್ರಗ್ ದಂಧೆ ಬಯಲಿಗೆಳೆದ ಪ್ರಕರಣ ಇದಾಗಿದೆ. ಒಟ್ಟು 6 ಕೆ.ಜಿ.ಯ 6 ಕೋಟಿ ರೂ. ಮೌಲ್ಯದ ಎಂಡಿಎಂ ಡ್ರಗ್ ವಶಕ್ಕೆ ಪಡೆಯಲಾಗಿದೆ. ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದು 15 ಗ್ರಾಂ ಎಂಡಿಎಂ ವಶಕ್ಕೆ ಪಡೆಯಲಾಗಿತ್ತು. ಈತನ ವಿಚಾರಣೆ ನಡೆಸಿದ ವೇಳೆ ನೈಜೀರಿಯನ್ ಪ್ರಜೆಯ ಕೈವಾಡ ಇರುವುದು ಬೆಳಕಿಗೆ ಬಂದಿತ್ತು. ಆತನ ಜಾಡು ಹಿಡಿದು ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ಆತನನ್ನು ವಶಕ್ಕೆ ಪಡೆದಿದ್ದಾರೆʼʼ ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಪೊಲೀಸ್ ಅಧಿಕಾರಿಗಳು 35 ಡೆಬಿಟ್ ಕಾರ್ಡ್‌ಗಳು, 10 ಬ್ಯಾಂಕ್ ಪಾಸ್ ಪುಸ್ತಕಗಳು, 17 ಸಿಮ್ ಕಾರ್ಡ್‌, ಬಂಧಿತನ ಪಾಸ್‌ಪೋರ್ಟ್ ಸಹಿತ ಎಲ್ಲ ದಾಖಲೆ ವಶಕ್ಕೆ ಪಡೆದಿದ್ದಾರೆ. ಈತ ಸಣ್ಣ ಸಣ್ಣ ಪ್ಯಾಕೆಟ್‌ಗಳ ಮೂಲಕ ರಾಜ್ಯದ ಹಲವಡೆ ಡ್ರಗ್ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಮಂಗಳೂರು ನಗರದಲ್ಲಿ 50ಕ್ಕೂ ಅಧಿಕ ಪ್ಯಾಕೆಟ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

”ಬೆಂಗಳೂರು ನಗರದ ದೊಮ್ಮಸಂದ್ರ ಗ್ರಾಮದ ಸ್ವಾಮಿ ವಿವೇಕಾನಂದ ನಗರದ ಬಾಡಿಗೆ ಮನೆಯೊಂದರ ಮೇಲೆ ದಾಳಿ ನಡೆಸಿ, ಮಾದಕ ವಸ್ತುವನ್ನು ಹೊಂದಿದ್ದ ನೈಜಿರಿಯಾ ಪ್ರಜೆಯನ್ನು ಬಂಧಿಸಲಾಗಿದೆʼʼ ಎಂದು ಅನುಪಮ್ ಅಗರ್ವಾಲ್ ವಿವರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Shivamogga News: ಎಸ್ಕೇಪ್‌ ಆಗಲು ಯತ್ನಿಸಿದ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿ ಬಂಧನ