Wednesday, 14th May 2025

Free Training: ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್‌; ಫೋಟೋಗ್ರಫಿ, ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

Free Training

ಬೆಂಗಳೂರು: ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 05 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ (Free Training) ಭಾಗವಹಿಸಬಹುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರುವ ಹಾಗೂ ಡಿಎಸ್‌ಎಲ್‌ಆರ್‌ ಕ್ಯಾಮೆರಾವನ್ನು ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಈ ಸುದ್ದಿಯನ್ನೂ ಓದಿ | Hostel Admission: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.