Wednesday, 14th May 2025

Rathotsava: ಕೈವಾರದಲ್ಲಿ ಹುಣ್ಣಿಮೆ ಪೂಜೆ ಅಂಗವಾಗಿ ರಥೋತ್ಸವ

ಚಿಂತಾಮಣಿ: ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿನಾರೇಯಣ ಮಠದಲ್ಲಿ ಅಶ್ವಿಜ ಮಾಸದ ಹುಣ್ಣಿಮೆಯ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ,  ಮಹಾಮಂಗಳಾರತಿಯನ್ನು ಬೆಳಗಲಾಯಿತು.

oppo_0

ಮಠದ ಆವರಣದಲ್ಲಿ ಸದ್ಭಕ್ತರ ಸಮ್ಮುಖದಲ್ಲಿ ರಥೋತ್ಸವವನ್ನು ನಡೆಸಲಾಯಿತು. ಭಕ್ತಾಧಿಗಳು ಹುಣ್ಣಿಮೆ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿ ದ್ದರು. ಉಪನ್ಯಾಸಕ ಯರಮರೆಡ್ಡಿಹಳ್ಳಿ ವೆಂಕಟರಮಣಪ್ಪ ಪ್ರವಚನವನ್ನು ನೀಡಿದರು. ಹುಣ್ಣಿಮೆ ಪ್ರಯುಕ್ತ ನಾದಸುಧಾರಸ ವೇದಿಕೆಯಲ್ಲಿ ಅಖಂಡ ಸಂಕೀರ್ತನೆಯನ್ನು ಏರ್ಪಡಿಸಲಾಗಿತ್ತು.

ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ : ಆಲಂಬಗಿರಿ ದೇವಾಲಯದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತೊಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಹುಣ್ಣಿಮೆ ಗಿರಿಪ್ರದಕ್ಷಿಣೆಯಲ್ಲಿ ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಎಂ.ಆರ್.ಜಯರಾಮ್ ಭಾಗವಹಿಸಿದ್ದರು. ಅವರೊಂದಿಗೆ ಹಲವಾರು ಭಕ್ತರು ಗಿರಿಪ್ರದಕ್ಷಿಣೆ ಮಾಡಿದರು.

ಇದನ್ನೂ ಓದಿ: Chikkaballapur: ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಜನಗಣತಿ ಸಮೀಕ್ಷಾ ವರದಿ ಕೂಡಲೇ ಜಾರಿ ಜಾರಿಗೊಳಿಸಬೇಕು