Saturday, 10th May 2025

Muda Case: ಮುಡಾ ಪ್ರಕರಣ; ನ.6ಕ್ಕೆ ವಿಚಾರಣೆಗೆ ಬರಲು ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಸಮನ್ಸ್

MUDA Scam

ಮೈಸೂರು: ಮುಡಾ ನಿವೇಶನ ಹಗರಣಕ್ಕೆ (Muda Case) ಸಂಬಂಧಿಸಿದಂತೆ ನ. 6ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ಸಮನ್ಸ್ ನೀಡಿದ್ದಾರೆ. ಬುಧವಾರ ಬೆಳಗ್ಗೆ ಮೈಸೂರಿನ ಕಚೇರಿಯಲ್ಲಿ ವಿಚಾರಣೆಗೆ ಬರುವಂತೆ ಸಿಎಂ ಅವರಿಗೆ ಸಮನ್ಸ್ ನೀಡಲಾಗಿದೆ.

ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದಾರೆ. ಉಳಿದ ಮೂವರು ಆರೋಪಿಗಳಾದ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ, ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕ ದೇವರಾಜು ಅವರ ವಿಚಾರಣೆಯು ಈಗಾಗಲೇ ಮುಗಿದಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸೂಚನೆಯಂತೆ ಲೋಕಾಯುಕ್ತ ಪೊಲೀಸರು ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಡಿಸೆಂಬರ್ ಅಂತ್ಯಕ್ಕೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಬೇಕಿದೆ.

ಈ ಸುದ್ದಿಯನ್ನೂ ಓದಿ | Viral News: ಮೈದಾನದಲ್ಲಿದ್ದಾಗಲೇ ಜವರಾಯನ ರೂಪದಲ್ಲಿ ಬಡಿದ ಸಿಡಿಲು; ಫುಟ್‌ಬಾಲ್‌ ಆಟಗಾರನ ಸಾವು: ವಿಡಿಯೊ ಇಲ್ಲಿದೆ

ಅಕ್ರಮ ಆಸ್ತಿ ಗಳಿಕೆ ಕೇಸ್‌ನಲ್ಲಿ ಡಿಕೆಶಿಗೆ ರಿಲೀಫ್‌; ಅರ್ಜಿ ವಿಚಾರಣೆ 1 ತಿಂಗಳು ಮುಂದೂಡಿದ ಸುಪ್ರೀಂ ಕೋರ್ಟ್‌

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ತನಿಖೆಗೆ ಈ ಹಿಂದಿನ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ 4 ವಾರಗಳ ಕಾಲ ಮುಂದೂಡಿದೆ.

ಕಾಂಗ್ರೆಸ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಈ ಹಿಂದೆ ತಿರಸ್ಕರಿಸಿತ್ತು. ಈ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ, ಅರ್ಜಿ ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿದೆ.

ಸಿಬಿಐ ತನಿಖೆ ಪುನರಾರಂಭಿಸುವಂತೆ ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯತ್ನಾಳ್‌ ಅವರು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇದೆ. ಈ ಸಂಬಂಧ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್‌ ಈ ಹಿಂದೆ ನೋಟಿಸ್‌ ನೀಡಿತ್ತು. ಇದಕ್ಕೆ ಉತ್ತರಿಸಲು ಡಿ.ಕೆ. ಶಿವಕುಮಾರ್‌ ಅವರ ವಕೀಲರು ಕಾಲಾವಕಾಶ ಕೇಳಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ವಿಚಾರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ. ಯತ್ನಾಳ್ ಪರ ಹಿರಿಯ ವಕೀಲ ಕೆ.ಪರಮೇಶ್ವರ್ ವಾದ ಮಂಡಿಸಿದ್ದು, ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ರಂಜಿತ್ ಕುಮಾರ್ ವಾದ ಮಂಡಿಸಿದ್ದಾರೆ.