Sunday, 11th May 2025

Good news: ಭಕ್ತರ ಮನೆ ಬಾಗಿಲಿಗೆ ಬರಲಿದೆ ದೇವಾಲಯಗಳ ಪ್ರಸಾದ!

kukke

ಬೆಂಗಳೂರು: ರಾಜ್ಯದ ಭಕ್ತರಿಗೆ ಇದು ಗುಡ್‌ ನ್ಯೂಸ್ (Good news). ಕರ್ನಾಟಕದ (Karnataka) ಪ್ರತಿ ದೇವಾಲಯಗಳ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಮುಜರಾಯಿ ಇಲಾಖೆ (Mujarai department) ಚಿಂತನೆ ನಡೆಸಿದೆ.

ಈ ಕುರಿತಾಗಿ ಮುಜುರಾಯಿ ಸಚಿವರ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದು ಟಿವಿ9 ಗೆ ಮುಜುರಾಯಿ ಇಲಾಖೆ ಆಯುಕ್ತ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಸದ್ಯ ಮುಜರಾಯಿ ಇಲಾಖೆ ಹೊಸ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ಜನರಿಗೆ ಸೇವೆ ನೀಡಲು ಹಲವಾರು ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಈಗಾಗಲೇ ಆನ್ ಲೈನ್ ಸೇವೆ, ಬುಕ್ಕಿಂಗ್ ಅಂತಾ ಜಾರಿ ಆಗಿದೆ. ಈಗ ಮತ್ತೊಂದು ಹೊಸ ಯೋಜನೆ ಜಾರಿಗೆ ಪ್ಲ್ಯಾನ್ ಮಾಡಲಾಗುತ್ತಿದೆ. ಇನ್ನು ಈ ಹೊಸ ಯೋಜನೆಯಿಂದ ಮನೆಯಲ್ಲೇ ಕುಳಿತು ಪ್ರಸಿದ್ದ ದೇವಾಲಯಗಳ ಪ್ರಸಾದವನ್ನ ಸ್ವೀಕರಿಬಹುದಾಗಿದೆ ಎಂದರು.

ಕರ್ನಾಟಕ ರಾಜ್ಯ ವ್ಯಾಪಿ ಇರುವ ಯಾವುದೇ ದೇವಸ್ಥಾನದ ಪ್ರಸಾದವನ್ನು ಆನ್​ ಲೈನ್‌ನ​ಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಪ್ರಸಾದ ತಂದು ಕೊಡುವ ಯೋಜನೆ ಶೀಘ್ರವೇ ಜಾರಿಗೆ ತರಲು ಚಿಂತನೆ ನಡೆದಿದೆ. ಈ ಕುರಿತಾಗಿ ಅಂಚೆ ಇಲಾಖೆ ಮತ್ತು ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದೆ. ಪ್ರಸಾದಕ್ಕೆ ಎಷ್ಟು ದರ ಇದೆಯೋ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರವನ್ನು ನಿಗದಿ ಮಾಡಲಾಗುತ್ತಿದೆ.

ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂದು ಇತ್ತೀಚೆಗೆ ಆದೇಶ ಹೊರಡಿಸಲಾಗಿತ್ತು. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿತ್ತು.