Sunday, 11th May 2025

MB Patil: ಪ್ರಧಾನಿ ಮನೆ ಮುಂದೆ ಧರಣಿ ಕೂರುವ ಧೈರ್ಯ ಬಿಜೆಪಿ ನಾಯಕರಿಗಿದೆಯಾ? ಎಂ‌. ಬಿ. ಪಾಟೀಲ್‌ ಪ್ರಶ್ನೆ

MB Patil

ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಪಡಿತರ ಚೀಟಿ (BPL Card) ರದ್ದುಪಡಿಸುತ್ತಿರುವುದನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಕೇಂದ್ರದ ಮೋದಿ ಸರ್ಕಾರವೇ ಡಿಜಿಟಲೀಕರಣದ ಹೆಸರಿನಲ್ಲಿ 5.80 ಕೋಟಿ ರೇಷನ್ ಕಾರ್ಡ್ ರದ್ದುಪಡಿಸಿದೆ. ಬಿಜೆಪಿ ನಾಯಕರೇಕೆ ಈಗ ಗಪ್-ಚುಪ್ ಆಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ‘ಎಕ್ಸ್’ ನಲ್ಲಿ ಗುರುವಾರ ಪ್ರಶ್ನಿಸಿದ್ದಾರೆ.

ತಮ್ಮ ಈ ಎಕ್ಸ್ ಸಂದೇಶದಲ್ಲಿ ಅವರು ರಾಜ್ಯ ಬಿಜೆಪಿಯ ವಿಜಯೇಂದ್ರ, ಅಶೋಕ, ಬಸನಗೌಡ ಪಾಟೀಲ ಯತ್ನಾಳ ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರನ್ನು ಟ್ಯಾಗ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | CM Siddaramaiah: ಈಗ ದೇಶದ ರಾಜಧಾನಿಯಲ್ಲೂ ಸಿಗುತ್ತದೆ ನಾಡಿನ ಹೆಮ್ಮೆ ನಂದಿನಿ ಹಾಲು!

ರಾಜ್ಯ ಬಿಜೆಪಿ ಇಬ್ಭಾಗವಾಗಿದೆ. ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಯತ್ನಾಳ ಮತ್ತು ಅವರ ತಂಡ ಪ್ರಯತ್ನಿಸುತ್ತಿದೆ. ಈಗ ವಿನಾ ಕಾರಣ ಪಡಿತರ ಚೀಟಿ ಹೆಸರಿನಲ್ಲಿ ಗದ್ದಲ ಸೃಷ್ಟಿಸುತ್ತಿದ್ದಾರೆ. ಬಿಪಿಎಲ್ ಪಡಿತರ ಚೀಟಿಯು ನಿಜವಾದ ಬಡವರಿಗೆ ಸಿಗಬೇಕು. ಹೀಗಾಗಿಯೇ ರಾಜ್ಯ ಸರ್ಕಾರವು ಶ್ರೀಮಂತರು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ಅಧಿಕಾರಿಗಳ ಬಳಿ‌ ಇರುವ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುತ್ತಿದೆ. ರಾಜ್ಯ ಬಿಜೆಪಿ ನಾಯಕರು ಇದರ ವಿರುದ್ಧ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | DK Shivakumar: 3 ಕ್ಷೇತ್ರಗಳ ಉಪಚುನಾವಣೆ; ಫಲಾಫಲ ಭಗವಂತನದ್ದು ಎಂದ ಡಿ.ಕೆ. ಶಿವಕುಮಾರ್

ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ವಿಜಯೇಂದ್ರ, ಅಶೋಕ, ಯತ್ನಾಳ ಅವರಿಗೆ ದೆಹಲಿಗೆ ಹೋಗಿ ಪ್ರಧಾನಿ ಮನೆಯ ಎದುರು ಧರಣಿ ಕೂರುವ ಧೈರ್ಯ ಇದೆಯೇ ಎಂದು ಸಚಿವ ಎಂ.ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ.