Saturday, 10th May 2025

Bharat Bommai: ಹಣದ ಹೊಳೆ ಹರಿಸಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲುವು; ಭರತ್ ಬೊಮ್ಮಾಯಿ ಆರೋಪ

Bharat Bommai

ಹಾವೇರಿ: ಶಿಗ್ಗಾಂವಿ ಸವಣೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ಗೆಲುವು ಸಾಧಿಸಿದೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ (Bharat Bommai) ಆರೋಪಿಸಿದ್ದಾರೆ. ಚುನಾವಣೆ ಫಲಿತಾಂಶದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಣದ ಹೊಳೆ ಹರಿಸಿ ಗೆಲುವು ದಾಖಲಿಸಿದೆ. ಈ ಚುನಾವಣೆಯಲ್ಲಿ ಪಕ್ಷದ ಸೋಲಿನ ಕಾರಣಗಳ ಬಗ್ಗೆ ಬೂತ್ ಮಟ್ಟದಲ್ಲಿ ಚರ್ಚಿಸಲಾಗುತ್ತದೆ‌ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Election Results 2024: ಎಲ್ಲಾ ರಾಜ್ಯಗಳಲ್ಲಿ ಆಡಳಿತಪರ ಅಲೆ; ಮಹಾರಾಷ್ಟ್ರ ಮಹಾಯುತಿಗೆ, ಜಾರ್ಖಂಡ್‌ಗೆ ಸೊರೇನ್‌, ಕರ್ನಾಟಕದಲ್ಲಿ ಕೈಗೆ ಜೈ

ನಾನು ಚುನಾವಣೆಯಲ್ಲಿ ಸೋತಿದ್ದೇನೆ ಅಷ್ಟೇ, ಆದರೆ ಈ ಕ್ಷೇತ್ರದ ಅಭಿವೃದ್ಧಿಗೆ, ಜನರ ಪರವಾಗಿ ಸದಾ ದುಡಿಯುತ್ತೇನೆ. ಮುಂದಿನ ದಿನಗಳಲ್ಲಿ ಈ ಸೋಲಿನ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ನನಗೆ ಮತ ನೀಡಿದ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.