Tuesday, 13th May 2025

ಇಂದು ಕರ್ನಾಟಕ ಬಂದ್: ರಾಜ್ಯಾದ್ಯಂತ ಕಟ್ಟೆಚ್ಚರ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಶನಿವಾರ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.

ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ಕೆಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡದೆ ಕನ್ನಡ ಪರ ಸಂಘಟನೆಗಳ ಹೋರಾಟಕ್ಕೆ ಮಾತ್ರ ಬೆಂಬಲ ನೀಡಿದೆ. ಹಾಗಾಗಿ,  ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುವ ಸಾಧ್ಯತೆ ಇದೆ.

ನಗರದ ಪುರಭವನದ ಬಳಿ‌ ಪ್ರತಿಭಟನಕಾರರು ಬೃಹತ್ ಮೆರವಣಿಗೆ ನಡೆಸಲಿದ್ದಾರೆ. ಅಲ್ಲದೇ, ಮೇಖ್ರಿ ವೃತ್ತದಿಂದ ಆನಂದರಾವ್ ವೃತ್ತದವರೆಗೆ ರ್ಯಾಲಿ ನಡೆಸಲಿದ್ದಾರೆ. ಮೆರವಣಿಗೆಗೆ ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸ ಲಾಗಿದ್ದು ಪರಿಸ್ಥಿತಿಯ ಮೇಲೆ ಹಿರಿಯ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು‌ ಕಳೆದೊಂದು ವಾರದಿಂದ ಅತ್ತಿಬೆಲೆ ಗಡಿ ಬಂದ್, ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್, ಕೆ.ಆರ್.ಪುರದಲ್ಲಿ ಪ್ರತಿಭಟನೆ ನಡೆಸಿ ಜನ ಬೆಂಬಲ ಗಳಿಸಲು ಪ್ರಯತ್ನಿಸಿವೆ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ತಾಲೂಕುಗಳಲ್ಲಿ ತಹಶೀಲ್ದಾರ್ ಕಚೇರಿಗಳಿಗೆ ಮುತ್ತಿಗೆ ಹಾಕಲು ಹೋರಾಟಗಾರರು ತೀರ್ಮಾನಿಸಿದ್ದಾರೆ. ವೈದ್ಯಕೀಯ ಸೇವೆ, ಔಷಧ ಅಂಗಡಿ, ಹಾಲು, ದಿನಪತ್ರಿಕೆ ಇನ್ನಿತರ ಅಗತ್ಯ ಸೇವೆಗಳಲ್ಲಿ ವ್ಯತ್ಯಯವಾಗುವುದಿಲ್ಲ.

ಚಾಲಕರ ಸಂಘ ಬಂದ್ ಗೆ ಬೆಂಬಲ ಸೂಚಿಸಿರುವುದರಿಂದ ಆಟೋ, ಓಲಾ-ಊಬರ್ ಕ್ಯಾಬ್ ಸಂಚಾರ ಸೇವೆಯಲ್ಲಿ ವ್ಯತ್ಯಯ ವಾಗುವ ಸಾಧ್ಯತೆ ಹೆಚ್ಚಿದೆ.

Leave a Reply

Your email address will not be published. Required fields are marked *