ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ(Gas cylinder Blast) ಸಂಭವಿಸಿದ್ದು, ಮನೆಗಳು ಛಿದ್ರಗೊಂಡಿವೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ.
ಡಿಜೆ ಹಳ್ಳಿಯಲ್ಲಿ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿಯ ಆನಂದ ಥಿಯೇಟರ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ. ನಜೀರ್, ಅವರ ಪತ್ನಿ ಕಲ್ಸುಮ್, ಇಬ್ಬರು ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 11.30ರ ಸುಮಾರಿಗೆ ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ ಸೋರಿಕೆಯಾಗಿದ್ದು, ಭೀಕರ ಸ್ಫೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ತಿಂಗಳು ಉಡುಪಿಯಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಪಾರ್ಟಿ (Party) ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ (Gas Cylinder Blast) ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ವೊಂದರಲ್ಲಿ ನಡೆದಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ.
ಮೂರು ಅಂತಸ್ತಿನ ಅಪಾರ್ಟ್ ಮೆಂಟ್ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೋಡೆಯಲ್ಲಾ ಛಿದ್ರ ಛಿದ್ರವಾಗಿವೆ. ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಸ್ಫೋಟ ಸಂಭವಿಸುವ ವೇಳೆ ಮನೆಯಲ್ಲಿ ಮಕ್ಕಳ ಸಹಿತ 8 ಮಂದಿ ಮನೆಯಲ್ಲಿದ್ದರು ಎಂದು ತಿಳಿದು ಬಂದಿದೆ.
ಸಿಲಿಂಡರ್ ಸ್ಫೋಟದ ಬಳಿಕ ತಕ್ಷಣವೇ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ: Gas Leakage: ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಅನಿಲ ಸೋರಿಕೆ; ಮೂವರ ದಾರುಣ ಸಾವು