ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಇಂದಿನಿಂದ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾನುವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಡಿ. 2 ಮತ್ತು 3 ರಂದು ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆ ಸುರಿಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ (Karnataka Weather) ಘೋಷಣೆ ಮಾಡಲಾಗಿದೆ.
ಡಿ. 2ರಂದು ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD):
— Karnataka State Natural Disaster Monitoring Centre (@KarnatakaSNDMC) December 1, 2024
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ಡಿಸೆಂಬರ್ 2 & 3 ರಂದು ಅತಿಭಾರಿ ಮಳೆಯಾಗುವ ನಿರೀಕ್ಷೆಯಿದೆ. IMD ಯಿಂದ #ಆರೆಂಜ್ಅಲರ್ಟ್ ನೀಡಲಾಗಿದೆ, pic.twitter.com/GAdo0zHQAS
ಇನ್ನು ಡಿ.3ರಂದು ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಡಿ.4ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,
ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Earthquake: ಪಶ್ಚಿಮಘಟ್ಟ ಪ್ರದೇಶದಲ್ಲಿ ಕಂಪಿಸಿದ ಭೂಮಿ; ಸ್ಥಳೀಯರಲ್ಲಿ ಆತಂಕ
ಹಾಗೆಯೇ ಡಿ. 5ರಂದು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಡಿ. 6ರಂದು ಕೂಡ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ.
ಡಿ.3ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರದಿಂದ ಸಾಧಾರಣ ಮಳೆ, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚು. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 23° C ಮತ್ತು 19° C ಆಗಿರಬಹುದು.