Thursday, 15th May 2025

Tumkur News: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಜನರಿಗೆ ಬೇಸರ ಮೂಡಿಸಿದೆ: ಚಿದಾನಂದ್ ಎಂ.ಗೌಡ

ಶಿರಾ ತಾಲೂಕಿನಲ್ಲಿ ಬಿಜೆಪಿ ಬೂತ್ ಸಮಿತಿ ನೇಮಕ ಪ್ರಕ್ರಿಯೆಗೆ ಚಾಲನೆ

ಶಿರಾ: ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಪಕ್ಷದ ಆಡಳಿತ ಜನರಿಗೆ ಬೇಸರ ಮೂಡಿಸಿದ್ದು, ಶೀಘ್ರ ದಲ್ಲಿಯೇ ಬರುವಂತ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮಮಟ್ಟದಲ್ಲಿ ಬಿಜೆಪಿ ಪಕ್ಷ ಗಟ್ಟಿಗೊಳಿಸುವ ಉದ್ದೇಶದಿಂದ ಪ್ರತಿಯೊಬ್ಬ ಕಾರ್ಯಕರ್ತ ಹೆಚ್ಚು ಕ್ರಿಯಾಶೀಲರಾಗಿ ಪಕ್ಷ ಸಂಘಟನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.

ಅವರು ಗುರುವಾರ ಶಿರಾ ನಗರದ ಸಪ್ತಗಿರಿ ಬಡಾವಣೆ ಹಾಗೂ ತಾಲೂಕಿನ ಹೆಂದೊರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗೊಂಡನಹಳ್ಳಿ ಮತ್ತು ಗೋಪಿಕುಂಟೆ ಗ್ರಾಮಗಳಲ್ಲಿ ಭಾರತೀಯ ಜನತಾ ಪಾರ್ಟಿ ಶಿರಾ ವಿಧಾನಸಭಾ ಕ್ಷೇತ್ರದ ಬೂತ್ ಸಮಿತಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.

೨೦೨೮ರಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಇಂದಿನಿಂದಲೇ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುವ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡುತ್ತಿದ್ದೇವೆ ಎಂದರು.
ಬಿಜೆಪಿ ರಾಷ್ಟಿçÃಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪೂರ್ಣಿಮ ಪ್ರಕಾಶ್ ಮಾತನಾಡಿ ಬಿಜೆಪಿ ಪಕ್ಷ ಬೂತ್ ಮಟ್ಟದಲ್ಲಿ ಗಟ್ಟಿಯಾಗಬೇಕು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನಸಾಮಾನ್ಯರ ಮುಂದಿಟ್ಟು, ಜನರನ್ನು ಬಿಜೆಪಿ ಪಕ್ಷದ ಕಡೆ ಹೆಚ್ಚು ಒಲವು ಹೊಂದುವAತೆ ಮಾಡಿ, ಬಿಜೆಪಿ ಸದಸ್ಯರನ್ನಾಗಿ ಮಾಡಬೇಕು.

ಪ್ರತಿಯೊಬ್ಬ ಕಾರ್ಯಕರ್ತ ಪ್ರಾಮಾಣಿಕತೆಯಿಂದ ಕೆಲಸ ಮಾಡಿದಾಗ ಬಿಜೆಪಿ ಬಲಿಷ್ಠವಾಗಲಿದ್ದು ಎಲ್ಲಾ ಕ್ಷೇತ್ರದಲ್ಲೂ ಗೆಲ್ಲಲು ಸಾಧ್ಯವಾಗಲಿದೆ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದರು.
ಮಧುಗಿರಿ ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷ ಹನುಮಂತೇಗೌಡ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿದ್ದ, ಸಂದರ್ಭದಲ್ಲಿ ಶಿರಾ ಕ್ಷೇತ್ರಕ್ಕೆ ಹೇಮಾವತಿ ನೀರು ಹರಿಸಿ ಮದಲೂರು ಕೆರೆ ಭರ್ತಿ ಮಾಡಿ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಿದ ಕೀರ್ತಿ ಬಿಜೆಪಿ ಸರಕಾರಕ್ಕೆ ಸಲ್ಲುತ್ತದೆ. ಕಾಂಗ್ರೆಸ್ ಸರ್ಕಾರದಲ್ಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ ಕೇವಲ ರಾಜ್ಯದಲ್ಲಿ ಸಮುದಾಯ ಓಲೈಕೆ ರಾಜಕಾರಣ ನಡೆಯುತ್ತಿದೆ. ಮತದಾರ ಜಾಗೃತರಾಗಬೇಕೆಂದು ಬಿಜೆಪಿ ಪಕ್ಷವನ್ನು ಬೆಂಬಲಿಸಿ ಗಟ್ಟಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ನಾರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ನಗರ ಅಧ್ಯಕ್ಷ ಗಿರಿಧರ್, ಜಿಲ್ಲಾ ಪ್ರಧಾನ ಪ್ರಧಾನ ಕಾರ್ಯದರ್ಶಿ ಯಂಜಲಗೆರೆ ಮೂರ್ತಿ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಕೆ.ಎಸ್. ನಾಗರಾಜು, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಎಚ್.ಕೆ. ಕುಮಾರ್, ಜಿಲ್ಲಾ ಘಟಕ ಅಧ್ಯಕ್ಷ ರಂಗಸ್ವಾಮಿ, ಶಿರಾ ನಗರ ಪ್ರಧಾನ ಕಾರ್ಯದರ್ಶಿ ಸಂತೆಪೇಟೆ ನಟರಾಜ್, ಲತಾ, ಬಿಜೆಪಿ ಓಬಿಸಿ ಘಟಕದ ಅಧ್ಯಕ್ಷ ಮಾಗೋಡ್ ಪ್ರತಾಪ್, ರಂಗಾಪುರ ನಾಗರಾಜ ಗೌಡ, ತರೂರು ಬಸವರಾಜ, ಹೊಸಹಳ್ಳಿ ಸಿದ್ದಲಿಂಗಪ್ಪ, ಶಿರಾ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯರಾದ ನರಸಿಂಹರಾಜು, ಗ್ರಾ ಪಂ ಮಾಜಿ ಅಧ್ಯಕ್ಷ ಈರಣ್ಣ ಪಟೇಲ್, ಸಿದ್ದನಹಳ್ಳಿ ತಿಪ್ಪೇಸ್ವಾಮಿ, ಹೊಸಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನ ಕುಮಾರ್, ಗೋಪಿ ಕುಂಟೆ ಕುಮಾರ್, ಮದಕ್ಕನಹಳ್ಳಿ ಗೊಲ್ಲರಹಟ್ಟಿ ಗೌಡಪ್ಪ, ಸದಸ್ಯ ಎಂ. ಶಿವಲಿಂಗಯ್ಯ ಮಹಾಂತೇಶ್, ಸುರೇಶ್, ರಾಜಣ್ಣ ಸೇರಿದಂತೆ ಹಲವರು ಹಾಜರಿದ್ದರು.