ಅಡಿಲೇಡ್: ಇಲ್ಲಿನ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ಭಾನುವಾರ ಅಂತ್ಯವಾಗಿದ್ದ ಎರಡನೇ ಹಾಗೂ ಪಿಂಕ್ ಬಾಲ್ ಟೆಸ್ಟ್ (IND vs AUS) ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 10 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1 ಸಮಬಲ ಕಾಯ್ದುಕೊಂಡಿವೆ.
ಪ್ರಥಮ ಇನಿಂಗ್ಸ್‌ನಲ್ಲಿ ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್ ದಾಳಿ ನಡೆಸಿ ಆರು ವಿಕೆಟ್‌ಗಳನ್ನು ಕಿತ್ತಿದ್ದರೆ, ಟ್ರಾವಿಸ್ ಹೆಡ್ ಅವರು ಸ್ಪೋಟಕ ಶತಕವನ್ನು ಸಿಡಿಸಿದ್ದರು. ಇದು ಪಂದ್ಯದ ಪಾಲಿಗೆ ಟರ್ನಿಂಗ್ ಪಾಯಿಂಟ್ ಆಗಿತ್ತು. ಆದರೆ, ಭಾರತ ತಂಡ ಎರಡೂ ಇನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿತ್ತು. ಪ್ರಥಮ ಇನಿಂಗ್ಸ್‌ನಲ್ಲಿ 180 ರನ್‌ಗಳಿಗೆ ಆಲ್‌ಔಟ್ ಆಗಿದ್ದರೆ, ದ್ವಿತೀಯ ಇನಿಂಗ್ಸ್‌ನಲ್ಲಿ 175 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ರೋಹಿತ್ ಶರ್ಮಾ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್‌ಗಳು ಎರಡೂ ಇನಿಂಗ್ಸ್‌ಗಳಲ್ಲಿ ದೀರ್ಘಾವಧಿ ಬ್ಯಾಟ್ ಮಾಡಲು ವಿಫಲರಾಗಿದ್ದಾರೆ.
ದ್ವಿತೀಯ ಇನಿಂಗ್ಸ್‌ನಲ್ಲಿ 19 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ ವಿಕೆಟ್ ನಷ್ಟವಿಲ್ಲದೆ ಗೆಲುವಿನ ದಡ ಸೇರಿತು. 10 ವಿಕೆಟ್‌ಗಳ ಗೆಲುವಿನ ಮೂಲಕ ಆಸ್ಟ್ರೇಲಿಯಾ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಗೆಲುವಿನ ಲಯಕ್ಕೆ ಮರಳಿದೆ.
ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಭಾರತ ತಂಡ ಸೋಲಲು ಪ್ರಮುಖ ನಾಲ್ಕು ಕಾರಣಗಳು
1.ಎರಡನೇ ಟೆಸ್ಟ್‌ಗೆ 10 ದಿನಗಳ ಅಂತರ
ಪರ್ತ್ ಟೆಸ್ಟ್‌ನಲ್ಲಿ ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರೂ ದ್ವಿತೀಯ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಬಲಿಷ್ಠವಾಗಿ ಕಮ್‌ಬ್ಯಾಕ್ ಮಾಡಿತ್ತು. ಆ ಮೂಲಕ ಆಸ್ಟ್ರೇಲಿಯಾ ಎದುರು ಮೊದಲನೇ ಟೆಸ್ಟ್ ಪಂದ್ಯದಲ್ಲಿ 295 ರನ್‌ಗಳ ಭರ್ಜರಿ ಗೆಲುವು ಪಡೆದಿತ್ತು. ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಟೆಸ್ಟ್ ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಆದರೆ, ಮೊದಲನೇ ಟೆಸ್ಟ್‌ನಿಂದ ಎರಡನೇ ಟೆಸ್ಟ್‌ಗೆ 10 ದಿನಗಳ ಅಂತರವಿತ್ತು. ಈ ವೇಳೆ ಭಾರತ ತಂಡ ಅಭ್ಯಾಸದ ಪಂದ್ಯವಾಡಿತ್ತು ಹಾಗೂ ಅಭ್ಯಾಸವನ್ನು ಕೂಡ ನಡೆಸಿತ್ತು. ಎಷ್ಟೇ ಅಭ್ಯಾಸ ನಡೆಸಿದರೂ ಟೀಮ್ ಇಂಡಿಯಾಗೆ ಪರ್ತ್ ಟೆಸ್ಟ್ ಗೆಲುವಿನ ವಿಶ್ವಾಸವನ್ನು ಅಡಿಲೇಡ್‌ಗೆ ತರುವಲ್ಲಿ ವಿಫಲವಾಯಿತು. 10 ದಿನಗಳ ಅಂತರ ಆಟಗಾರರ ಮೇಲೆ ಗಂಭೀರ ಪರಿಣಾಮ ಬೀರಿತು.
2. ಎರಡನೇ ಟೆಸ್ಟ್‌ಗೆ ಮೂರು ಬದಲಾವಣೆ
ಪರ್ತ್ ಟೆಸ್ಟ್‌ನಲ್ಲಿ ಗೆಲುವು ಪಡೆದ ಹೊರತಾಗಿಯೂ ಅಡಿಲೇಡ್ ಟೆಸ್ಟ್‌ಗೆ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಮೂರು ಬದಲಾವಣೆಯನ್ನು ತರಲಾಗಿತ್ತು. ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್ ಹಾಗೂ ಆರ್ ಅಶ್ವಿನ್ ಅವರು ಎರಡನೇ ಟೆಸ್ಟ್‌ಗೆ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದರು. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅವರು ಸಹಜವಾಗಿ ಎರಡನೇ ಟೆಸ್ಟ್‌ಗೆ ಬರುತ್ತಿದ್ದರು. ಆದರೆ, ವಾಷಿಂಗ್ಟನ್ ಸುಂದರ್ ಬದಲು ಆರ್ ಅಶ್ವಿನ್‌ಗೆ ಅವಕಾಶ ನೀಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.
ಮತ್ತೊಂದು ಕಡೆ ರೋಹಿತ್ ಶರ್ಮಾ ಅವರು ಪ್ಲೇಯಿಂಗ್ XIಗೆ ಬಂದರೂ ಇನಿಂಗ್ಸ್ ಆರಂಭಿಸಲು ಕೆಎಲ್ ರಾಹುಲ್‌ಗೆ ಅವಕಾಶ ಮಾಡಿಕೊಟ್ಟಿದ್ದರು. ಇದು ಟೀಮ್ ಇಂಡಿಯಾದ ಬ್ಯಾಟಿಂಗ್ ಸಂಯೋಜನೆಯನ್ನು ಸಂಪೂರ್ಣವಾಗಿ ಬದಲಿಸಿತು. ಇನ್ನು ಆರ್ ಅಶ್ವಿನ್ ಅವರು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಪರಿಣಾಮಕಾರಿಯಾಗಿ ಆಡುವಲ್ಲಿ ವಿಫಲರಾದರು.
Australia win the second Test and level the series.#TeamIndia aim to bounce back in the third Test.
— BCCI (@BCCI) December 8, 2024
Scoreboard ▶️ https://t.co/upjirQCmiV#AUSvIND pic.twitter.com/Tc8IYLwpan
4 ಎರಡೂ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ
ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಹೊರತಾಗಿಯೂ ಭಾರತ ತಂಡ ಅದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲವಾಗಿತ್ತು. ಅದರಲ್ಲಿಯೂ ಪಿಂಕ್ ಬಾಲ್‌ನಲ್ಲಿ ಎದುರಾದ ಸವಾಲನ್ನು ಸಮರ್ಥವಾಗಿ ಮೆಟ್ಟಿ ನಿಲ್ಲುವಲ್ಲಿ ಭಾರತ ವಿಫಲವಾಗಿತ್ತು. ಪ್ರಥಮ ಇನಿಂಗ್ಸ್‌ನಲ್ಲಿ 180 ರನ್‌ಗಳಿಗೆ ಆಲ್‌ಔಟ್ ಆಗಿದ್ದ ಟೀಮ್ ಇಂಡಿಯಾ, ದ್ವಿತೀಯ ಇನಿಂಗ್ಸ್‌ನಲ್ಲಿ 175 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಪ್ರಥಮ ಇನಿಂಗ್ಸ್‌ನಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿದ ತಮ್ಮ ಟೆಸ್ಟ್ ವೃತ್ತಿ ಜೀವನದ ಶ್ರೇಷ್ಠ ಸ್ಪೆಲ್ ಮಾಡಿ 48ಕ್ಕೆ 6 ವಿಕೆಟ್ ಕಬಳಿಸಿದರು. ಇನ್ನು ದ್ವಿತೀಯ ಇನಿಂಗ್ಸ್‌ನಲ್ಲಿ ಪ್ಯಾಟ್ ಕಮಿನ್ಸ್ ಐದು ವಿಕೆಟ್ ಸಾಧನೆ ಮಾಡಿದರು. ಶುಭಮನ್ ಗಿಲ್, ಕೆಎಲ್ ರಾಹುಲ್, ರಿಷಭ್ ಪಂತ್ ಉತ್ತಮ ಆರಂಭ ಪಡೆದರೂ ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ಎಡವಿದರು.
ಇನ್ನು ವಿರಾಟ್ ಕೊಹ್ಲಿ ಎರಡೂ ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 7 ಮತ್ತು 11 ರನ್ ಗಳಿಸಿದರು ಹಾಗೂ ನಾಯಕ ರೋಹಿತ್ ಶರ್ಮಾ ಎರಡೂ ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 3 ಮತ್ತು 6 ರನ್‌ಗೆ ಸೀಮಿತರಾದರು. ಆದರೆ, ಅಡಿಲೇಡ್ ಟೆಸ್ಟ್‌ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಎರಡೂ ಇನಿಂಗ್ಸ್‌ಗಳಲ್ಲಿ ತಲಾ 42 ರನ್‌ಗಳನ್ನು ಗಳಿಸಿದರು.
4. ಭಾರತದ ಬೌಲಿಂಗ್ ಪರಿಣಾಮಕಾರಿಯಾಗಿ ಇರಲಿಲ್ಲ
ಪರ್ತ್ ಟೆಸ್ಟ್‌ನಲ್ಲಿ ಭಾರತ ತಂಡವನ್ನು ಜಸ್‌ಪ್ರೀತ್ ಬುಮ್ರಾ ಮುನ್ನಡೆಸಿದ್ದರು ಹಾಗೂ ಯಶಸ್ವಿಯಾಗಿದ್ದರು. ಆದರೆ, ಎರಡನೇ ಟೆಸ್ಟ್‌ನಲ್ಲಿ ಮೊಹಮ್ಮದ್ ಶಮಿ ಅವರ ಅನುಪಸ್ಥಿತಿ ಟೀಮ್ ಇಂಡಿಯಾಗೆ ಬಲವಾಗಿ ಕಾಡಿತು. ಭಾರತ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 180 ರನ್‌ಗಳಿಗೆ ಆಲ್‌ಔಟ್ ಆದ ಬಳಿಕ, ಆಸ್ಟ್ರೇಲಿಯಾ ತಂಡವನ್ನು ಪ್ರಥಮ ಇನಿಂಗ್ಸ್‌ನಲ್ಲಿ ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ವಿಫಲವಾಗಿತ್ತು. ಆಸೀಸ್ ತಂಡದ ಬಹುತೇಕ ಬ್ಯಾಟಿಂಗ್ ವಿಭಾಗವನ್ನು ಟೀಮ್ ಇಂಡಿಯಾ ಬೌಲರ್‌ಗಳು ಕಟ್ಟಿ ಹಾಕಿದ್ದರು.
ಆದರೆ, ಮಾರ್ನಸ್ ಲಾಬುಶೇನ್ ಮತ್ತು ಟ್ರಾವಿಡ್ ಹೆಡ್ ಅವರನ್ನು ಆರಂಭದಲ್ಲಿಯೇ ಔಟ್ ಮಾಡುವಲ್ಲಿ ನಮ್ಮ ಬೌಲರ್‌ಗಳಿಂದ ಸಾಧ್ಯವಾಗಲಿಲ್ಲ. ಜಸ್‌ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ, ಅವರು 4 ಎಕಾನಮಿ ರೇಟ್‌ನಲ್ಲಿ ರನ್ ಕೊಟ್ಟಿದ್ದರು. ಇನ್ನು ಹರ್ಷಿತ್ ರಾಣಾ ಹಾಗೂ ನಿತೀಶ್ ರೆಡ್ಡಿ ಅವರು ಕ್ರಮಾವಾಗಿ 5.40 ಮತ್ತು 4.20ರ ಸರಾಸರಿಯಲ್ಲಿ ರನ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 337 ರನ್‌ಗಳನ್ನು ಕಲೆ ಹಾಕಿತ್ತು. ಅದರಲ್ಲಿಯೂ ಟ್ರಾವಿಸ್ ಹೆಡ್ ಅವರ ಎದುರು ಟೀಮ್ ಇಂಡಿಯಾ ಬೌಲರ್‌ಗಳು ಪರಿಣಾಮಕಾರಿಯಾಗಿರಲಿಲ್ಲ.
ಈ ಸುದ್ದಿಯನ್ನು ಓದಿ: IND vs AUS: ರೋಹಿತ್ ಶರ್ಮಾ ವೈಫಲ್ಯಕ್ಕೆ ಕಾರಣ ತಿಳಿಸಿದ ಸುನೀಲ್ ಗವಾಸ್ಕರ್!