Saturday, 10th May 2025

Pavagada News: ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪಾವಗಡದಲ್ಲಿ ಪ್ರತಿಭಟನೆ

Pavagada News

ಪಾವಗಡ: ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಹೇಳಿಕೆಯನ್ನು ಖಂಡಿಸಿ, ಪಾವಗಡದಲ್ಲಿ (Pavagada News) ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ತಾಲೂಕು ಕಚೇರಿಯ ಎದುರು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರ ಭಾವಚಿತ್ರವನ್ನು ದಹಿಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕೈಬಿಡಬೇಕು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಬಳಿಕ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ತಹಸೀಲ್ದಾರ್‌ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ; ಹೆಬ್ಬಾಳ್ಕರ್ ಪರ ಸಿದ್ದರಾಮಯ್ಯ ಹೇಳಿಕೆ

ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಸಿ.ಕೆ.ಟಿ. ತಿಪ್ಪೇಸ್ವಾಮಿ. ಪೆದ್ದಣ್ಣ. ವಳ್ಳೂರು ನಾಗೇಶ್. ಕನ್ಮೇಡಿ ಕೃಷ್ಣಮೂರ್ತಿ. ಟಿ. ನಾಗರಾಜ್. ನೆಲಿಗಾನಹಳ್ಳಿ ದುಗ್ಗಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.