Saturday, 10th May 2025

Drone Training: ಡ್ರೋನ್ ತರಬೇತಿಗೆ ಅರ್ಜಿ ಆಹ್ವಾನ; ಡಿ.23 ಕೊನೆ ದಿನ

Drone Training

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಡ್ರೋನ್ ಆಧಾರಿತ ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ ಮತ್ತು ಯುವತಿಯರಿಗೆ ಡ್ರೋನ್ ತರಬೇತಿಗಾಗಿ (Drone Training) ಅರ್ಜಿ ಆಹ್ವಾನಿಸಲಾಗಿದೆ.

ವಯೋಮಿತಿ: ಪುರುಷರು 35 ವರ್ಷ ಹಾಗೂ ಮಹಿಳೆಯರು 40 ವರ್ಷದೊಳಗಿರಬೇಕು, ಮೂಲನಿವಾಸಿ ಮತ್ತು ಅಲೆಮಾರಿ / ಅರೆ ಅಲೆಮಾರಿ ಮತ್ತು ಸೂಕ್ಷ್ಮ /ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಈ ಸುದ್ದಿಯನ್ನೂ ಓದಿ | IAF Agniveervayu Recruitment 2025: ಅಗ್ನಿವೀರ್‌ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ

ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಡಿಸೆಂಬರ್ 23 ರ ಸಂಜೆ 5.30 ರೊಳಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು-70 ಇಲ್ಲಿ ಸಲ್ಲಿಸಬಹುದು.

ಈ ಸುದ್ದಿಯನ್ನೂ ಓದಿ | BCCI Meeting: ಜ.12ರಂದು ಬಿಸಿಸಿಐ ನೂತನ ಕಾರ್ಯದರ್ಶಿ ಆಯ್ಕೆ ಸಾಧ್ಯತೆ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26711096 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.